ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗವಾರ: ಹಾಡಹಗಲೇ ನಡು ರಸ್ತೆಯಲ್ಲಿ ಉದ್ಯಮಿಯ ಹತ್ಯೆ

Last Updated 13 ನವೆಂಬರ್ 2021, 18:53 IST
ಅಕ್ಷರ ಗಾತ್ರ

ಬೆಂಗಳೂರು: ನಾಗವಾರ ವರ್ತುಲ ರಸ್ತೆಯ ಬಳಿಯ ಸರ್ವಿಸ್‌ ರಸ್ತೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಉದ್ಯಮಿಯೊಬ್ಬರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದೆ.

ಆರ್‌.ಎಸ್‌.ಪಾಳ್ಯ ನಿವಾಸಿ ಶ್ರೀಧರ್‌ (41) ಹತ್ಯೆಯಾದವರು. ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಯಶವಂತಪುರದಲ್ಲಿ ಗಾರ್ಮೆಂಟ್ಸ್‌ ಉದ್ಯಮ ನಡೆಸುತ್ತಿದ್ದ ಶ್ರೀಧರ್‌, ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆನಾಗವಾರ ವರ್ತುಲ ರಸ್ತೆಯ ಬಳಿಯ ಸರ್ವಿಸ್‌ ರಸ್ತೆಯಲ್ಲಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬೈಕ್‌ನಲ್ಲಿ ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಇದನ್ನು ಗಮನಿಸಿದ ಶ್ರೀಧರ್‌ ಕಾರನ್ನು ವೇಗವಾಗಿ ಚಲಾಯಿಸಿದ್ದಾರೆ. ಆದರೂ ಬಿಡದ ದುಷ್ಕರ್ಮಿಗಳು ಕಾರನ್ನು ಬೆನ್ನಟ್ಟಿದ್ದಾರೆ. ಇದನ್ನು ಕಂಡು ಗಾಬರಿಗೊಂಡ ಅವರು ಕಾರಿನಿಂದ ಇಳಿದು ಓಡಿಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಮೃತರ ಪತ್ನಿ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಪರಿಚಯಸ್ಥರೇ ಶ್ರೀಧರ್‌ ಅವರಿಗೆ ದೂರವಾಣಿ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿರಬಹುದು. ಅಲ್ಲಿ ಬಂದ ನಂತರ ಅವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ. ಘಟನಾ ಸ್ಥಳದ ಸುತ್ತಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದುಪೂರ್ವ ವಿಭಾಗದ ಡಿಸಿಪಿ ಎಸ್‌.ಡಿ.ಶರಣಪ್ಪಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT