ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈಲು ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ 6 ವರ್ಷದ ಬಾಲಕಿಯ ಕೊಲೆ

Published 3 ಜುಲೈ 2024, 16:13 IST
Last Updated 3 ಜುಲೈ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ ಸುಮಾರು 6 ವರ್ಷದ ಹೆಣ್ಣು ಮಗುವಿನ ಮೃತದೇಹ ಬುಧವಾರ ಪತ್ತೆಯಾಗಿದೆ. ಬೇರೆಲ್ಲೋ ಕೊಲೆ ಮಾಡಿ ಇಲ್ಲಿ ಬಿಸಾಡಿರಬೇಕು ಎಂದು ರೈಲ್ವೆ ಎಸ್‌ಪಿ ಶಂಕೆ ವ್ಯಕ್ತಪಡಿಸಿದ್ದಾರೆ.

ರೈಲ್ವೆ ಸಿಬ್ಬಂದಿ ನೀಡಿದ ಮಾಹಿತಿಯಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇರೆ ಯಾವುದೋ ಸ್ಥಳದಲ್ಲಿ ಹತ್ಯೆಗೈದು ಮೃತದೇಹವನ್ನು ತಂದು ಎಸೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದೆ.

‘ಭಿಕ್ಷಾಟನೆ ಮಾಡುವ ಕುಟುಂಬವೊಂದು ಈ ಪ್ರದೇಶದಲ್ಲಿದ್ದಿದ್ದನ್ನು ನೋಡಿದವರಿದ್ದಾರೆ. ಹಾಗಾಗಿ ಅವರನ್ನು ಕೂಡ ವಿಚಾರಣೆ ಮಾಡಲಾಗುವುದು. ಬಾಲಕಿ ಯಾರು? ಯಾಕೆ ಕೊಲೆ ಮಾಡಲಾಗಿದೆ ಎಂಬುದು ತನಿಖೆಯ ಬಳಿಕ ತಿಳಿಯಲಿದೆ. ಮೈಮೇಲೆ ಗಾಯಗಳಿವೆ. ಲೈಂಗಿಕ ದೌರ್ಜನ್ಯ ಎಸಗಲಾಗಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಗೊತ್ತಾಗಲಿದೆ. ಬೆಂಗಳೂರು ಕೇಂದ್ರ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ’ ಎಂದು ರೈಲ್ವೆ ಎಸ್‌ಪಿ ಡಾ. ಸೌಮ್ಯಲತಾ ಎಸ್.ಕೆ. ಮಾಹಿತಿ ನೀಡಿದರು.

‘ಪಾರ್ಕಿಂಗ್‌ ಪ್ರದೇಶ, ಪ್ಲಾಟ್‌ಫಾರ್ಮ್‌, ರೈಲು ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಗಳಲ್ಲಿ ಇರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದು ತಿಳಿಸಿದರು.

Quote -

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT