ಶನಿವಾರ, ಫೆಬ್ರವರಿ 29, 2020
19 °C

ಬೆಂಗಳೂರಿನಲ್ಲಿ ಪೊಲೀಸ್ ಮಾಹಿತಿದಾರನ ಬರ್ಬರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸ್ ಮಾಹಿತಿದಾರನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.

ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರಭು ಅಲಿಯಾಸ್ ಅಪ್ಪು (27) ಕೊಲೆಯಾದ ದುರ್ದೈವಿ. ಬ್ಯಾಂಕ್ ನಲ್ಲಿ ಚೆಕ್ ಸಂಗ್ರಹಿಸುವ ಕೆಲಸವನ್ನು ಪ್ರಭು ಮಾಡುತ್ತಿದ್ದರು.

ಕಳ್ಳರ ಬಗ್ಗೆ ಪೊಲೀಸರಿಗೆ ಪ್ರಭು ಮಾಹಿತಿ ನೀಡುತ್ತಿದ್ದರು. ಎರಡು ಬಾರಿ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಪ್ರಭು  ಅವರು ಹಿಡಿದುಕೊಟ್ಟಿದ್ದರು. ಹೀಗಾಗಿಯೇ ಹಳೇ ದ್ವೇಷ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಪ್ರಭು ಅವರಿಗೆ ಹಲವು ಬಾರಿ ಇರಿದಿದ್ದಾರೆ. ರಕ್ತಸ್ರಾವದಿಂದ ಪ್ರಭು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದರು.

ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು