‘ಪೊಲೀಸರ ಪ್ರಕಾರ ವಿದ್ಯಾರ್ಥಿನಿಯನ್ನು ಮೊದಲು ಕೊಲೆ ಮಾಡಿ ನಂತರ ಅತ್ಯಾಚಾರ ಮಾಡಲಾಗಿದೆ. ಈ ಪ‍್ರಕರಣ ಕುರಿತು ಸಮಗ್ರ ತನಿಖೆ ನಡೆಸಬೇಕು. ಮಹಿಳಾ ವೈದ್ಯರು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸಂಘದ ರಾಜ್ಯಶಾಖೆ ಅಧ್ಯಕ್ಷ ಡಾ.ಎಸ್ ಶ್ರೀನಿವಾಸ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ವಿದ್ಯಾರ್ಥಿನಿ ಕೊಲೆ ಖಂಡಿಸಿ ಮಂಗಳವಾರ ರಾಜ್ಯದಾದ್ಯಂತ ಮೋಂಬತ್ತಿ ಮೆರವಣಿಗೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.