ಬುಧವಾರ, ಮೇ 12, 2021
17 °C

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ 'ಕಾಡು' ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸುನೀಲ್ ಅಲಿಯಾಸ್ ಕಾಡುನನ್ನು (34) ಮಾರಕಾಸ್ತ್ರಗಳಿಂದ ಕೊಚ್ಚಿ ಶನಿವಾರ ತಡರಾತ್ರಿ ಕೊಲೆ ಮಾಡಲಾಗಿದೆ.

‘ಸ್ಥಳೀಯ ನಿವಾಸಿಯಾಗಿದ್ದ ಸುನೀಲ್, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬ್ಯಾಟರಾಯನಪುರ ಠಾಣೆ ರೌಡಿ ಪಟ್ಟಿಯಲ್ಲಿ ಆತನ ಹೆಸರಿತ್ತು’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಸುನೀಲ್‌ನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದ ಸುನೀಲ್ ರಸ್ತೆಯಲ್ಲೇ ನರಳಿ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ತಿಳಿಸಿದರು.

‘ರೌಡಿ ಸೋಮನ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುನೀಲ್, ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದ. ಅದೇ ಕಾರಣಕ್ಕೆ ಸುನೀಲ್ ಹಾಗೂ ರೌಡಿ ಸೋಮನ ಸಹಚರರ ನಡುವೆ ಆಗಾಗ ಜಗಳವಾಗುತ್ತಿತ್ತು. ಸೋಮನ ಸಹಚರರೇ ಕೃತ್ಯ ಎಸಗಿರುವ ಅನುಮಾನವಿದೆ’ ಎಂದೂ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು