ಶುಕ್ರವಾರ, ಸೆಪ್ಟೆಂಬರ್ 25, 2020
25 °C

ಕೊಲೆ, ಸುಲಿಗೆ: ಗೂಂಡಾ ಕಾಯ್ದೆಯಡಿ 'ಮಿಂಡ' ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು; ಕೊಲೆ, ಕೊಲೆಗೆ ಯತ್ನ, ಸುಲಿಗೆ, ದರೋಡೆ ಅಪರಾಧಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ವಿನಯ್‌ಕುಮಾರ್ ಅಲಿಯಾಸ್ ಮಿಂಡ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

'ಮಹಾಲಕ್ಷ್ಮಿ ಲೇಔಟ್‌ನ ಗೆಳೆಯರ ಬಳಗ ಬಳಿಯ ಶ್ರೀರಾಮನಗರ ನಿವಾಸಿಯಾದ ವಿನಯ್‌ಕುಮಾರ್, 2010ರಿಂದಲೇ ಅಪರಾಧ ಕೃತ್ಯ ಎಸಗುತ್ತಿದ್ದ' ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದರು.

'ನಂದಿನಿ ಲೇಔಟ್, ಮಹಾಲಕ್ಷ್ಮಿ ಲೇಔಟ್, ಪೀಣ್ಯ, ವಿಲ್ಸನ್ ಗಾರ್ಡನ್ ಹಾಗೂ ವೈಯಾಲಿಕಾವಲ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದವು. 2015ರಲ್ಲೇ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಕೆಲ ದಿನ ಜೈಲಿನಲ್ಲಿದ್ದ ಆತ, ನಂತರ ಜೈಲಿನಿಂದ ಹೊರಬಂದಿದ್ದ' ಎಂದೂ ತಿಳಿಸಿದರು.

'ಅಪರಾಧ ಚಟುವಟಿಕೆ ಮುಂದುವರಿಸಿದ್ದ ಆತ, ಜನರನ್ನು ಹೆದರಿಸುತ್ತಿದ್ದ. ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದ. ಹೀಗಾಗಿ, ಆತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ' ಎಂದೂ ಹೇಳಿದರು‌.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು