ಆನೇಕಲ್: ಕರ್ನಾಟಕ ಸುಗಮ ಸಂಗೀತ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 11 ಮತ್ತು 12ರಂದು ಆಯೋಜಿಸಿರುವ ರಾಜ್ಯಮಟ್ಟದ 18ನೇ ಸುಗಮ ಸಂಗೀತ ಸಮ್ಮೇಳನಕ್ಕೆ ಪಟ್ಟಣ ಸಜ್ಜಾಗಿದೆ.
ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಪಟ್ಟಣದ ವೆಂಕಟೇಶ್ವರ ವೃತ್ತದಿಂದ ಪ್ರಾರಂಭವಾಗಲಿದ್ದು ಮಂಗಳ ಕಲಶಗಳು, ಜನಪದ ಕಲಾ ತಂಡಗಳು, ಕವಿಗಳು, ಸಾಹಿತಿ, ಕಲಾವಿದರು ಕಾವ್ಯ ದಿಬ್ಬಣದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆನೇಕಲ್‌ನ 100 ಶಿಬಿರಾರ್ಥಿಗಳು ಏಕಕಾಲದಲ್ಲಿ ಗಾಯನ ನಡೆಸಲಿದ್ದು, ಇದಕ್ಕಾಗಿ ತಯಾರಿ ನಡೆಸಿದ್ದಾರೆ. ಸಮ್ಮೇಳನವನ್ನು ಕವಿ ದೊಡ್ಡರಂಗೇಗೌಡ ಉದ್ಘಾಟಿಸಲಿದ್ದಾರೆ. ಶಾಸಕ ಬಿ. ಶಿವಣ್ಣ, ಸಂಸದ ಡಿ.ಕೆ. ಸುರೇಶ್, ಕರ್ನಾಟಕ ರಾಜ್ಯ ಸುಗಮ ಸಂಗೀತ ಪರಿಷತ್‌ನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ, ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಪಾಲ್ಗೊಳ್ಳಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.