ಬೆಂಗಳೂರು: ತಮಿಳುನಾಡಿನ ತಿರುವಳ್ಳುವರ್ನಲ್ಲಿ ನಿರ್ಮಾಣಗೊಳ್ಳಲಿರುವ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಮಾರಕ ಮತ್ತು ವಸ್ತು ಸಂಗ್ರಾಹಲಯಕ್ಕಾಗಿ ನಿಧಿ ಸಂಗ್ರಹಿಸುವ ಉದ್ದೇಶದಿಂದ ಡಿಸೆಂಬರ್ 8ರಂದು ನಗರದ ಕನಕಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾಮಿಂಗ್ ಆರ್ಟ್ಸ್ನಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್, ‘ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಹಾಡಿರುವ ಕನ್ನಡ ಸಿನಿಮಾಗಳ ಜನಪ್ರಿಯ ಹಾಡುಗಳನ್ನು ಹಿನ್ನೆಲೆ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಮತ್ತು ಇತರೆ ಗಾಯಕರು ಹಾಡಲಿದ್ದಾರೆ, ಸಂಗೀತ ಪ್ರಿಯರನ್ನು ರಂಜಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಡಿ.8ರಂದು ನಡೆಯುವ ಸಂಗೀತ ಕಾರ್ಯಕ್ರಮದ ಮೂಲಕ ನಿಧಿಯನ್ನು ಸಂಗ್ರಹಿಸಿ ಅದನ್ನು ಸ್ಮಾರಕ, ವಸ್ತು ಸಂಗ್ರಹಾಲಯಕ್ಕೆ ನಿರ್ಮಾಣಕ್ಕೆ ಬಳಸಲಾಗುತ್ತದೆ. ಬುಕ್ ಮೈ ಶೋ ಮೂಲಕ ಟಿಕೆಟ್ ಕಾಯ್ದಿರಿಸಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.