ವಾಷಿಂಗ್ಟನ್: ಮಿಷನ್ ದೃಷ್ಟಿ ಉಪಗ್ರಹದ ಯಶಸ್ವಿ ಉಡಾವಣೆಗಾಗಿ ಬೆಂಗಳೂರು ಮೂಲದ ಬಾಹ್ಯಾಕಾಶ ಸ್ಟಾರ್ಟ್ ಅಪ್ ‘ಗ್ಯಾಲಕ್ಸ್ ಐ’ ಅನ್ನು ಸ್ಪೇಸ್ ಎಕ್ಸ್ ಸಂಸ್ಥಾಪಕ, ಉದ್ಯಮಿ ಇಲಾನ್ ಮಸ್ಕ್ ಅಭಿನಂದಿಸಿದ್ದಾರೆ.

ಮಿಷನ್ ದೃಷ್ಟಿ ಉಡಾವಣೆಗಾಗಿ ಗ್ಯಾಲಕ್ಸ್ ಐ ಅನ್ನು ಅಭಿನಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಇದಕ್ಕೆ ಮಂಗಳವಾರ ಪ್ರತಿಕ್ರಿಯಿಸಿರುವ ಮಸ್ಕ್ ‘ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.

ಈ ಉಡಾವಣೆಯು ಭಾರತದ ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ಪ್ರಮುಖ ಸಾಧನೆ. ದೇಶದ ಬೆಳೆಯುತ್ತಿರುವ ನಾವೀನ್ಯತೆ ಪರಿಸರ ವ್ಯವಸ್ಥೆಯ ಪ್ರತಿಬಿಂಬ ಎಂದು ಪ್ರಧಾನಿ ಶ್ಲಾಘಿಸಿದ್ದರು.

ರಾಷ್ಟ್ರ ನಿರ್ಮಾಣ ಮತ್ತು ತಾಂತ್ರಿಕ ಪ್ರಗತಿಯ ಕಡೆಗೆ ಭಾರತದ ಯುವಕರ ಉತ್ಸಾಹವನ್ನು ಈ ಮಿಷನ್ ಒತ್ತಿಹೇಳುತ್ತದೆ ಎಂದು ಪ್ರಧಾನಿ ಹೇಳಿದ್ದರು.

‘ಗ್ಯಾಲಕ್ಸ್ ಐನಿಂದ ನಡೆದ ಮಿಷನ್ ದೃಷ್ಟಿ ಉಡಾವಣೆಯು ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ಪ್ರಮುಖ ಸಾಧನೆಯಾಗಿದೆ. ವಿಶ್ವದ ಮೊದಲ ಆಪ್ಟೋಸಾರ್ ಉಪಗ್ರಹ ಮತ್ತು ಭಾರತದಲ್ಲಿ ಖಾಸಗಿಯಾಗಿ ನಿರ್ಮಿಸಲಾದ ಅತಿದೊಡ್ಡ ಉಪಗ್ರಹದ ಯಶಸ್ವಿ ಉಡಾವಣೆಯು ನಮ್ಮ ಯುವಕರ ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣದ ಉತ್ಸಾಹಕ್ಕೆ ಸಾಕ್ಷಿಯಾಗಿದೆ’ಎಂದು ಪ್ರಧಾನಿ ತಿಳಿಸಿದ್ದರು.

ಭಾನುವಾರ ಕ್ಯಾಲಿಫೋರ್ನಿಯಾದಿಂದ ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ ಮೂಲಕ ಉಪಗ್ರಹವನ್ನು ಉಡಾಯಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.