ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಭರವಸೆಗಳನ್ನು ಇದುವರೆಗೂ ಈಡೇರಿಸಿಲ್ಲ. ಈ ಬಗ್ಗೆ ಹೇಳಿದ್ದೇನು? ಮಾಡಿದ್ದೇನು? ಮುಂದೇನು? ಎಂಬ ವರದಿಯನ್ನು ಮೇ 16ರಂದು ಪುರಭವನದಲ್ಲಿ ನಡೆಯುವ ಕರ್ನಾಟಕ ಮುಸ್ಲಿಂ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಒಕ್ಕೂಟ ತಿಳಿಸಿದೆ.

ಒಕ್ಕೂಟದ ಮುಖಂಡರಾದ ತನ್ವೀರ್ ಅಹಮದ್, ಮೌಲಾನಾ ಮಹಮ್ಮದ್, ಜುಲ್ಫೀಕರ್ ರಜಾ ನೂರಿ, ಶಬ್ಬೀರ್ ಅಹಮದ್ ಹುಸೈನಿ ನದ್ವಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಹಿಜಾಬ್ ನಿರ್ಬಂಧ, ಮೀಸಲಾತಿ ರದ್ದತಿ, ದ್ವೇಷ ಭಾಷಣ, ದ್ವೇಷ ಅಪರಾಧ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ರಾಜಕೀಯ ಪ್ರಾತಿನಿಧ್ಯದಲ್ಲಿ ಅಡ್ಡಗಾಲು, ವಕ್ಫ್ ವಿಷಯ, ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿರ್ಬಂಧ ಕಾಯ್ದೆ ತೆರವು, ವಿದ್ಯಾರ್ಥಿವೇತನ, ಶಿಕ್ಷಣ ಕ್ಷೇತ್ರದ ಬೇಡಿಕೆಗಳನ್ನು ಇದುವರೆಗೂ ಈಡೇರಿಸಿಲ್ಲ. ಈ ಎಲ್ಲ ವಿಷಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದರು.

‘ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮುಸ್ಲಿಂ ಸಂಘಗಳು ಹಾಗೂ ಒಕ್ಕೂಟದ ಮುಖಂಡರು, ಉಲೇಮಾಗಳು, ವಕೀಲರು, ನಿವೃತ್ತ ಅಧಿಕಾರಿಗಳು, ಹೋರಾಟಗಾರರು ಸೇರಿದಂತೆ ನೂರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದೇವೆ. ಈ ಸಮಾವೇಶಕ್ಕೆ ಯಾವುದೇ ರಾಜಕಾರಣಿಗಳಿಗೆ ಆಹ್ವಾನ ಇರುವುದಿಲ್ಲ’ ಎಂದು ತಿಳಿಸಿದರು.

‘ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯವನ್ನು ಯಾವ ರೀತಿಯಾಗಿ ನಡೆಸಿಕೊಳ್ಳುತ್ತಿದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯಲಿವೆ. ಸಮಾವೇಶದಲ್ಲಿ ಬಿಡುಗಡೆಯಾಗುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ನೀಡಲಾಗುವುದು. ಈ ಸಮಾವೇಶದ ಉದ್ದೇಶ ಸಂಘರ್ಷವಲ್ಲ. ಮುಸ್ಲಿಮರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಒತ್ತಡ ಹೇರಲಾಗುವುದು’ ಎಂದರು.

ಸುಹೇಲ್ ಅಹಮದ್ ಮರೂರ್, ಯಹ್ಯಾ ದಾಮೂದಿ ಮಹಮ್ಮದ್ ಹುಸೇನ್ ಷರೀಫ್ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.