ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿ ಆಹ್ವಾನ

Published : 12 ಸೆಪ್ಟೆಂಬರ್ 2024, 20:37 IST
Last Updated : 12 ಸೆಪ್ಟೆಂಬರ್ 2024, 20:37 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಮುಸ್ಲಿಂ ಬರಹಗಾರರ ಉತ್ತಮ ಕನ್ನಡ ಕೃತಿಗೆ ನೀಡುವ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಆಸಕ್ತ ಮುಸ್ಲಿಂ ಬರಹಗಾರರು 2023ರಲ್ಲಿ ಪ್ರಕಟವಾದ ತಮ್ಮ ಕನ್ನಡ ಕೃತಿಯ ನಾಲ್ಕು ಪ್ರತಿಗಳನ್ನು ಇದೇ 20ರ ಒಳಗೆ ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು- 575001 ಈ ವಿಳಾಸಕ್ಕೆ ಕಳುಹಿಸಬೇಕು.  ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ ಎಂದು ಸಂಘದ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಕ್ಕೆ: 9845054191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT