ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಹತ್ತು ಭರವಸೆಗಳ ಪೈಕಿ ಒಂದನ್ನು ಮಾತ್ರ ಈಡೇರಿಸಿದೆ. 2 ಬಿ ಮೀಸಲಾತಿ ಮರುಸ್ಥಾಪನೆ ಮಾಡಬೇಕು, ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿ ಸಬೇಕು ಹಾಗೂ ಮುಸ್ಲಿಮರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವುದು ಸೇರಿದಂತೆ ಹಲವು ಭರವಸೆಗಳನ್ನು ಈಡೇರಿಸಬೇಕು ಎಂದು ಮುಸ್ಲಿಂ ಸಮಾವೇಶ ಒತ್ತಾಯಿಸಿತು.

ನಗರದ ಪುರಭವನದಲ್ಲಿ ಶನಿವಾರ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ಮುಸ್ಲಿಂ ಸಮಾವೇಶದಲ್ಲಿ, ‘ಕಾಂಗ್ರೆಸ್ ಸರ್ಕಾರ ಹೇಳಿದ್ದೇನು? ಮಾಡಿದ್ದೇನು? ಮುಂದೇನು?’ ಎಂಬ ವರದಿ ಮತ್ತು ಆಗ್ರಹಗಳ ಪಟ್ಟಿ ಬಿಡುಗಡೆ ಮಾಡಿ, ಕಾಲಮಿತಿಯಲ್ಲಿ ಈಡೇರಿಸುವಂತೆ ಆಗ್ರಹಿಸಿತು.

ಈ ವರದಿಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಬಂಧಪಟ್ಟ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೂ ತಲುಪಿಸಲು ಸಮಾವೇಶ ನಿರ್ಧಾರ ಕೈಗೊಂಡಿತು.

ಸಮಾವೇಶದಲ್ಲಿ ಮಾತನಾಡಿದ ಮುಖಂಡರು, ‘ಈ ಸಮಾವೇಶ ಕಾಂಗ್ರೆಸ್ ಪಕ್ಷದ ವಿರುದ್ಧ ಅಲ್ಲ. ಮುಸ್ಲಿಂ ಸಮುದಾಯಕ್ಕೆ ಕೊಟ್ಟ ಭರವಸೆ ಈಡೇರಿಸಲಾಗಿದೆಯೇ? ಎಂಬುದನ್ನು ಜನರ ಮುಂದಿಡುವ ಉದ್ದೇಶವಾಗಿದೆ. ರಾಜ್ಯ ಸರ್ಕಾರ ಕೂಡಲೇ ಸಮುದಾಯದ ಆಶೋತ್ತರಗಳನ್ನು ಈಡೇರಿಸಬೇಕು. ಅಲ್ಲದೇ ರಾಜ್ಯ ಸರ್ಕಾರ ಸಾಂವಿಧಾನಿಕ ಅಧಿಕಾರ ಬಳಸಿ, ಎಸ್ಐಆರ್ ಜಾರಿಗೊಳಿಸಲು ಬಿಡಬಾರದು’ ಎಂದು ಮುಖಂಡರು ಹೇಳಿದರು.

ಸಮಾವೇಶದ ಸಂಚಾಲಕ ಸುಹೈಲ್ ಅಹ್ಮದ್ ಮಾತನಾಡಿ, ‘ ಬೇಡಿಕೆಗಳಲ್ಲಿ ಒಂದಾಗಿದ್ದ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲಾಗಿದೆ. ಉಳಿದ ಬೇಡಿಕೆಗಳನ್ನು ಈಡೇರಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಸಾಮಾಜಿಕ ಹೋರಾಟಗಾರ ಮೊಹಮ್ಮದ್ ಯಾಸೀನ್ ಮಲ್ಪೆ ಮಾತನಾಡಿ, ‘ದ್ವೇಷ ಹರಡುವವರನ್ನು ನಿಯಂತ್ರಿಸಲಾಗುವುದು ಎಂದು ಚುನಾವಣೆಗೂ ಮೊದಲು ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ, ದ್ವೇಷ ಹರಡುವ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಬೇಕು’ ಎಂದು ಒತ್ತಾಯಿಸಿದರು.

ಅಂಕಣಕಾರ ಶಿವಸುಂದರ್ ಮಾತನಾಡಿ, ‘ಸಮುದಾಯದ ಬೇಡಿಕೆಯನ್ನು ಕಾಲಮಿತಿಯಲ್ಲಿ ಈಡೇರಿಸಬೇಕು. ಸಂವಿಧಾನದ ಮೇಲೆ ದಾಳಿ ಮಾಡುವ ಯೋಜಿತ ಪ್ರಯತ್ನ ನಡೆಯುತ್ತಿದೆ. ಚುನಾವಣೆ ವೇಳೆ ಬಹಿರಂಗವಾಗಿಯೇ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಸಹಬಾಳ್ವೆ , ಬಂಧುತ್ವ ಇಲ್ಲವೆಂದರೆ ದೇಶಕ್ಕೆ ಉಳಿಗಾಲವಿಲ್ಲ’ ಎಂದು ಎಚ್ಚರಿಸಿದರು.

ಸಮುದಾಯದ ಬೇಡಿಕೆಗಳು

* ವಿವಿಧ ನಿಗಮ ಮಂಡಳಿಯಲ್ಲಿ ಪ್ರಾತಿನಿಧ್ಯ ನೀಡಬೇಕು. * ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ವಾಪಸ್ ಪಡೆಯಬೇಕು. * ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹತ್ತು ಸಾವಿರ ಕೋಟಿ ರೂಪಾಯಿ ಅನುದಾನ ನೀಡಬೇಕು. * ವಕ್ಫ್ ಆಸ್ತಿಗಳ ಅತಿಕ್ರಮಣ ಅಸಮರ್ಪಕ ಬಳಕೆ ವಕ್ಫ್ ಅಭಿವೃದ್ದಿ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. * ರಾಜ್ಯ ಸರ್ಕಾರ ಕೂಡಲೇ ಸಾಮಾಜಿಕ ಶೈಕ್ಷಣಿಕ ವರದಿಯನ್ನು ಬಿಡುಗಡೆ ಮಾಡಬೇಕು * ತೆಲಂಗಾಣದ ಮಾದರಿಯಲ್ಲಿ ಮೌಲಾನಾ ಆಜಾದ್ ಶಾಲೆ ಅಭಿವೃದ್ಧಿಗೊಳಿಸಬೇಕು. * ಮತಾಂತರ ನಿಷೇಧ ಕಾಯ್ದೆ ರದ್ದು ಮಾಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.