ಬೆಂಗಳೂರು: ಶ್ರೀ ರಾಮಸೇವಾ ಮಂಡಳಿ, ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್ ‘88ನೇ ಶ್ರೀ ರಾಮನವಮಿ ಸಂಗೀತೋತ್ಸವ’ದ ಪ್ರಯುಕ್ತ ನೀಡುವ ‘ಎಸ್.ಎಂ.ಕೃಷ್ಣ ಸ್ಮಾರಕ ರಾಷ್ಟ್ರೀಯ ಸಂಗೀತ ಪ್ರಶಸ್ತಿ’ಗೆ ಪಿಟೀಲು ವಾದಕರಾದ ಮೈಸೂರು ನಾಗರಾಜ್ ಮತ್ತು ಮೈಸೂರು ಮಂಜುನಾಥ್ ಆಯ್ಕೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕುಟುಂಬದ ಸದಸ್ಯರು ಟ್ರಸ್ಟ್ನಲ್ಲಿ ಈ ಪ್ರಶಸ್ತಿ ಸ್ಥಾಪಿಸಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಏ.18ರಂದು ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಟ್ರಸ್ಟ್ ಮಾರ್ಚ್ 27ರಿಂದ ಏಪ್ರಿಲ್ 22ರವರೆಗೆ ಚಾಮರಾಜಪೇಟೆಯ ಕೋಟೆ ಪ್ರೌಢಶಾಲೆ ಆವರಣದಲ್ಲಿ ‘88ನೇ ಶ್ರೀ ರಾಮನವಮಿ ಸಂಗೀತೋತ್ಸವ’ ಹಮ್ಮಿಕೊಂಡಿದೆ. ಈ ಉತ್ಸವದ ಭಾಗವಾಗಿ ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಎಸ್.ಎನ್. ವರದರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.