ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುತ್ತಿರುವುದರ ಕುರಿತು ಸಂಶಯ ವ್ಯಕ್ತಪಡಿಸಿ ನೀಡಿರುವ ಹೇಳಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.

ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಮ ಮಂದಿರ ನಿರ್ಮಾಣಕ್ಕೆ ಇಡೀ ದೇಶದ ಜನತೆ ಸ್ವಯಂಪ್ರೇರಿತರಾಗಿ ದೇಣಿಗೆ ನೀಡುತ್ತಿದ್ದಾರೆ. ಈ ಕುರಿತು ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿ ಮಾತನಾಡಿರುವುದು ಸರಿಯಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.