ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ಬಡಾವಣೆ: ರಸ್ತೆ ಕಾಮಗಾರಿ ಪೂರ್ಣಕ್ಕೆ ಸೂಚನೆ

Published 26 ಜೂನ್ 2023, 23:49 IST
Last Updated 26 ಜೂನ್ 2023, 23:49 IST
ಅಕ್ಷರ ಗಾತ್ರ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಕುಮಾರ ನಾಯಕ ಅವರು ಸೋಮವಾರ ವೀಕ್ಷಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

ನಾಲ್ಕು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಜಮೀನುಗಳನ್ನು ಈಗ ನಡೆದಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಕೊಮ್ಮಘಟ್ಟ, ಭೀಮನಕುಪ್ಪೆ, ಕೆ.ಕೃಷ್ಣಸಾಗರ ಗ್ರಾಮಗಳಲ್ಲಿ ಬರುವ ನಾಡಪ್ರಭು ಕೆಂಪೇಗೌಡ ಬಡಾವಣೆಗಳ ಬ್ಲಾಕ್ ಪರಿಶೀಲನೆ ನಡೆಯಿತು.

‘ಸೆಪ್ಟೆಂಬರ್ ಅಂತ್ಯದೊಳಗೆ ಸಾರ್ವಜನಿಕರು ಬಳಸುವ ರಸ್ತೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅಲ್ಲದೇ ನೀರು ಪೂರೈಕೆ ಮತ್ತು ಒಳಚರಂಡಿ, ವಿದ್ಯುತ್ ಸಂಪರ್ಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು’ ಆಯುಕ್ತರು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT