ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಗೆ (ಎನ್ಕೆಪಿಎಲ್) ಮೂಲಸೌಲಭ್ಯಗಳನ್ನು ಒದಗಿಸಿರುವ ಕುರಿತು ಎರಡೂವರೆ ವರ್ಷಗಳ ಬಳಿಕ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ–ರೇರಾ) ವಿಚಾರಣೆ ನಡೆಸಿತು.

ಬಡಾವಣೆಗೆ ಮೂಲಸೌಕರ್ಯ ಒದಗಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಿರುದ್ಧ ರೇರಾಗೆ ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ದೂರು ನೀಡಿದೆ.

ರೇರಾ ಅಧ್ಯಕ್ಷ ರಾಕೇಶ್ ಸಿಂಗ್ ಮಾತನಾಡಿ, ‘ಈಗಾಗಲೇ ಬಿಡಿಎ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿತ್ತು. ಆದರೆ, ನಿವೇಶನದ ಮಾಲೀಕರು ಸೌಕರ್ಯ ಪಡೆಯಲು ರೇರಾಕ್ಕೆ ಬರುವಂತೆ ಮಾಡಿದೆ’ ಎಂದು ಹೇಳಿದರು.

‘ಶೀಘ್ರವೇ ಮೂಲಸೌಕರ್ಯ ಒದಗಿಸಲಾಗುವುದು’ ಎಂಬ ಬಿಡಿಎ ಎಂಜಿನಿಯರ್ಗಳ ಉತ್ತರಕ್ಕೆ ಅಸಮಾಧಾನಗೊಂಡ ಅಧ್ಯಕ್ಷರು, ‘ಯೋಜನೆ ಯಾವಾಗ ಪೂರ್ಣಗೊಳ್ಳಲಿದೆ ಎಂಬುದರ ಬಗ್ಗೆ ಸಂಪೂರ್ಣ ವಿವರಗಳೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು’ ಎಂದು ಹೇಳಿದರು.

ಏಪ್ರಿಲ್ 9ಕ್ಕೆ ವಿಚಾರಣೆ ಮುಂದೂಡಲಾಯಿತು.

ಬಿಡಿಎ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ, ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.