ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೀತಾದೇವಿಗೆ ನಾಗಮಣಿ ಎಸ್. ರಾವ್ ಪ್ರಶಸ್ತಿ

Published 4 ಆಗಸ್ಟ್ 2024, 15:32 IST
Last Updated 4 ಆಗಸ್ಟ್ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದಿಂದ ನೀಡಲಾಗುವ 2024ನೇ ಸಾಲಿನ ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿಗೆ ಪತ್ರಕರ್ತೆ ಎಚ್.ಎಲ್.ಸೀತಾದೇವಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಇದೇ ತಿಂಗಳ 11ರಂದು ಬಸವನಗುಡಿಯ ಅಬಲಾಶ್ರಮದ ವೇದಿಕೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಎಚ್.ಎಲ್‌.ಸೀತಾದೇವಿ ಅವರು ದೀರ್ಘಕಾಲ ಕನ್ನಡಪ್ರಭ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದರು. ಕನ್ನಡ ಪತ್ರಿಕಾ ಕ್ಷೇತ್ರ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್‌.ಎಲ್‌.ಪುಷ್ಪಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT