ಕೆ.ಆರ್.ಪುರ: ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಸಂಬಂಧ ನಾಗಮೋಹನ್ ದಾಸ್ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು’ ಎಂದು ರಾಜ್ಯ ಬಿಜೆಪಿ ಪರಿಶಿಷ್ಟ ಮೋರ್ಚಾ ಉಪಾಧ್ಯಕ್ಷ ಹೂಡಿ ಎಚ್.ವಿ.ಮಂಜುನಾಥ್ ಎಚ್ಚರಿಸಿದರು.

ಈ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಾಗಮೋಹನ್ ದಾಸ್ ನೇತೃತ್ವದ ಆಯೋಗ ನ್ಯಾಯ ಸಮ್ಮತವಾದ ಸಮೀಕ್ಷೆ
ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ, ಸರ್ಕಾರ ವರದಿ ಜಾರಿಗೆ ಮೀನಮೇಷ ಎಣಿಸುತ್ತಿದೆ. ಇದಕ್ಕೆ ಕಾರಣ ಗೊತ್ತಾಗುತ್ತಿಲ್ಲ’ ಎಂದು ಹೇಳಿದರು.

‘ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವು
ದಾಗಿ ಮುಖ್ಯಮಂತ್ರಿ ತಿಳಿಸಿದ್ದರು. ಈಗ 16ರಂದು ಮತ್ತೊಂದು ವಿಶೇಷ ಸಂಪುಟ ಸಭೆ ಕರೆಯುತ್ತಿದ್ದಾರೆ. ಸರ್ಕಾರ ಪದೇ ಪದೇ ಮಾತು ತಪ್ಪುವ ಕೆಲಸ ಮಾಡುತ್ತಿದೆ’ ಎಂದು ದೂರಿದರು. ಕಾಂತರಾಜ ಆಯೋಗದ ವರದಿ ಯಂತೆ ನಾಗಮೋಹನ್ ದಾಸ್ ವರದಿ ಯನ್ನೂ ಜಾರಿಗೊಳಿಸದೆ ಕಾಲಹರಣ ಮಾಡಬಾರದು. ಆದಷ್ಟು ಬೇಗ ವರದಿ ಯನ್ನು ಜಾರಿಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು. ಸಭೆಯಲ್ಲಿ ವಕೀಲರಾದ ವಿಕ್ರಮ್, ಕೃಷ್ಣಮೂರ್ತಿ, ಕನ್ನೆಲಿ ಕೆ.ಎಂ.ಸುರೇಶ್, ರಾಜಶೇಖರ್, ಸಂಜಯ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.