ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾಜ್ಯ ಹೆದ್ದಾರಿ ವಿಸ್ತರಣೆ ಮಾಡುವ ಲೋಕೋಪಯೋಗಿ ಇಲಾಖೆ ನಡೆಗೆ ಆಕ್ಷೇಪ ವ್ಯಕ್ತವಾಗಿದೆ.

ಈ ರಸ್ತೆಯ ಯಥಾಸ್ಥಿತಿ ಕಾಪಾಡಬೇಕೆ ಹೊರತು, ವಿಸ್ತರಣೆ ಇಲ್ಲವೇ ಮೇಲ್ದರ್ಜೆಗೇರಿಸಲು ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಅದರ ಅನ್ವಯ ವನ್ಯಜೀವಿ ಮಂಡಳಿ ಯಥಾಸ್ಥಿತಿಗೆ ಶಿಫಾರಸು ಮಾಡಿತ್ತು. ಇದನ್ನು ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಒಪ್ಪಿಕೊಂಡು ರಾಜ್ಯಕ್ಕೆ ಆದೇಶ ನೀಡಿತ್ತು. ಹಾಗಿದ್ದರೂ, ಕರ್ನಾಟಕ ಮತ್ತು ಕೇರಳ ರಾಜ್ಯಗಳನ್ನು ಸಂಪರ್ಕಿಸುವ 21 ಕಿ.ಮೀ. ರಸ್ತೆಯಲ್ಲಿ ಕಾಮಗಾರಿ ನಡೆಸುತ್ತಿರುವ ಕ್ರಮಕ್ಕೆ ವಿರೋಧ ಎದುರಾಗಿದೆ.

‘ಇತ್ತೀಚಿನ ವರ್ಷಗಳಲ್ಲಿ ಇಲ್ಲಿ ಹೆದ್ದಾರಿ ನಿರ್ವಹಣೆ ಬಿಟ್ಟರೆ ಯಾವುದೇ ವಿಸ್ತರಣೆ ಕಾಮಗಾರಿ ನಡೆದಿರಲಿಲ್ಲ. ಈಗ ರಸ್ತೆ ವಿಸ್ತರಿಸುವ ಚಟುವಟಿಕೆ ಕೈಗೊಳ್ಳಲಾಗುತ್ತಿದೆ. ಇದನ್ನು ತಡೆಯಬೇಕಾದ ಅರಣ್ಯ ಇಲಾಖೆ ಮೌನ ವಹಿಸಿದೆ ’ ಎಂದು ವನ್ಯಜೀವಿ ಸ್ವಯಂ ಸೇವಾ ಸಂಸ್ಥೆ ಪ್ರತಿನಿಧಿ ಸಿಇಸಿಗೆ ದೂರು ನೀಡಿದ್ದಾರೆ.

ತರಾತುರಿ ಕಾಮಗಾರಿ: ಮೈಸೂರಿನಿಂದ ಹ್ಯಾಂಡ್ಪೋಸ್ಟ್ ಮಾರ್ಗವಾಗಿ ಕೇರಳದ ಮಾನಂದವಾಡಿಗೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಏರಿಯಾದಲ್ಲಿ ಹಾದು ಹೋಗುವ ಹಳೆ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಪರ್ಯಾಯ ರಸ್ತೆಗೆ ಸೂಚಿಸಲಾಗಿತ್ತು. ಹೀಗಿದ್ದರೂ ಉದ್ಬೂರು ಗೇಟ್ನಿಂದ ಬಾವಲಿ ಗೇಟ್ವರೆಗೆ 21 ಕಿ.ಮಿ ರಸ್ತೆ ವಿಸ್ತರಣೆ ಕಾಮಗಾರಿ ಆರಂಭವಾಗಿದೆ.

‘ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಪ್ರಯತ್ನ ಕೇರಳ ಭಾಗದಿಂದ ನಡೆದಿದೆ. ಈಗ ರಸ್ತೆ ವಿಸ್ತರಣೆಗೊಳಿಸಿ ನಿಧಾನವಾಗಿ 60 ಮೀಟರ್ಗೆ ವಿಸ್ತರಣೆ ಮಾಡಬಹುದು ಆತಂಕವೂ ಇದೆ’ ಎಂದು ವನ್ಯಜೀವಿ ಸ್ವಯಂ ಸೇವಾ ಸಂಸ್ಥೆ ಪ್ರತಿನಿಧಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಇಲ್ಲಿ ಯಾವುದೇ ವಿಸ್ತರಣೆ ಕಾರ್ಯ ನಡೆಯುತ್ತಿಲ್ಲ. ಬರೀ ನಿರ್ವಹಣೆಯಷ್ಟೇ. ನಿತ್ಯ ಸಂಚರಿಸುವ ವಾಹನಗಳು ರಸ್ತೆ ಬದಿಗೆ ಇಳಿದಾಗ ಆಗುತ್ತಿದ್ದ ತೊಂದರೆ ತಪ್ಪಿಸಲು ಎರಡೂ ಬದಿಯಲ್ಲಿ ಮಣ್ಣು ಹಾಕಲಾಗುತ್ತಿದೆ’ ಎಂದು ದೊಡ್ಡ ಬೈರನಕುಪ್ಪೆ ವಲಯ ಅರಣ್ಯಾಧಿಕಾರಿ ಹನುಮಂತರಾಜು ಅವರು ಸಮಜಾಯಿಷಿ ನೀಡಿದರು.

ಲೋಕೋಪಯೋಗಿ ಇಲಾಖೆ ಯಾವ ಅನುದಾನದ ಅಡಿ ರಸ್ತೆ ಅಗಲೀಕರಣ ಕೈಗೆತ್ತಿಕೊಂಡಿದೆ. ಎಷ್ಟು ಅನುದಾನ ಬಳಸುತ್ತಿದೆ. ಅರಣ್ಯ ಇಲಾಖೆ ಅನುಮತಿ ಪಡೆಯಲಾಗಿದೆಯೇ ಎನ್ನುವ ಕುರಿತು ಎಚ್.ಡಿ.ಕೋಟೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಅವರಿಂದ ಮಾಹಿತಿ ಪಡೆಯಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ಹುಲಿ ಸಂರಕ್ಷಿತ ಪ್ರದೇಶದ ಕೋರ್ ಪ್ರದೇಶದಲ್ಲಿ ರಸ್ತೆ ವಿಸ್ತರಣೆ ಮಾಡುವುದಕ್ಕೆ ಅವಕಾಶವಿಲ್ಲ. ಆದೇಶ ಉಲ್ಲಂಘಿಸಿ ಕಾಮಗಾರಿ ಕೈಗೊಂಡರೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುತ್ತೇವೆ
–ಕುಮಾರ ಪುಷ್ಕರ್ ಪಿಸಿಸಿಎಫ್( ವನ್ಯಜೀವಿ)

ಆದೇಶ ಏನಿದೆ?

ಹುಲಿ ಸಂರಕ್ಷಿತ ಪ್ರದೇಶದ ಕೋರ್ ಪ್ರದೇಶದಲ್ಲಿ ವಾಹನ ದಟ್ಟಣೆಯಿಂದ ವನ್ಯಜೀವಿಗಳ ಸಹಜ ಸಂಚಾರಕ್ಕೆ ಅಡ್ಡಿಯಾಗಿ ಅವುಗಳ ಸಾವಿಗೆ ಕಾರಣವಾಗುತ್ತಿದೆ. ಇದರಿಂದ ಕೋರ್ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಗಳ ವಿಸ್ತರಣೆ ಇಲ್ಲವೇ ವಿಸ್ತರಣೆಗೆ ಅವಕಾಶ ಮಾಡಿಕೊಡಬಾರದು. ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ (ಸಂಖ್ಯೆ 202/1995) ಸಲ್ಲಿಸಲಾಗಿತ್ತು. ಕೇಂದ್ರ ಉನ್ನತಾಧಿಕಾರ ಸಮಿತಿ ವರದಿ ಆಧರಿಸಿ 2008ರ ಮೇ 5ರಂದು ಸುಪ್ರೀಂ ಕೋರ್ಟ್ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಪ್ರದೇಶದಲ್ಲಿ ರಸ್ತೆ ವಿಸ್ತರಣೆ ಮಾಡಬಾರದು. ಸಂಜೆ 6ರಿಂದ ಬೆಳಗಿನಜಾವ 6ರವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಆದೇಶಿಸಿತ್ತು. ಬಳಿಕ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.