ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರ್ತಪೇಟೆಯಲ್ಲಿ ಪೊಲೀಸ್‌ ಭದ್ರತೆ ಮುಂದುವರಿಕೆ

Published 20 ಮಾರ್ಚ್ 2024, 16:34 IST
Last Updated 20 ಮಾರ್ಚ್ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ಹನುಮಾನ್‌ ಚಾಲೀಸಾ ಹಾಕಿದ್ದ ವಿಚಾರಕ್ಕೆ ಮೊಬೈಲ್‌ ಅಂಗಡಿ ಮಾಲೀಕನ ಕೊಲೆಗೆ ಯತ್ನಿಸಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಇದುವರೆಗೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ಹೊರರಾಜ್ಯಕ್ಕೆ ಪರಾರಿಯಾಗಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಹಲ್ಲೆ ಪ್ರಕರಣ ಖಂಡಿಸಿ ಮಂಗಳವಾರ ನಗರ್ತಪೇಟೆಯಲ್ಲಿ ಬಿಜೆಪಿ ಹಾಗೂ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದರು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

‘ಸ್ಥಳದಲ್ಲಿ ಈಗಲೂ 100ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪರಿಸ್ಥಿತಿ ಶಾಂತವಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT