ಬೆಂಗಳೂರು: ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೊ ನಿಲ್ದಾಣದ ಬಳಿ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮಂಜುನಾಥ್ (38) ಎಂಬುವರು ಮೃತಪಟ್ಟಿದ್ದಾರೆ.

ಚಿಕ್ಕಬಿದರಕಲ್ಲು ನಿವಾಸಿಯಾದ ಮಂಜುನಾಥ್ ಅವರು ಯಲಹಂಕದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಮಂಜುನಾಥ್, ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದಾಗ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಅಪಘಾತದ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿ ಆಗಿದ್ದಾನೆ. ವಾಹನದ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

ಪೀಣ್ಯ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.