ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿಗೆ ನಾಗಮೋಹನದಾಸ್‌ ಆಯ್ಕೆ

Published 23 ಮೇ 2024, 20:00 IST
Last Updated 23 ಮೇ 2024, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ 2024ನೇ ಸಾಲಿನ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ’ಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹25 ಸಾವಿರ ನಗದು, ಕಂಚಿನ ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

‘2024ರ ಜೂನ್‌ 10ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿವೃತ್ತ ಪ್ರಾಧ್ಯಾಪಕ ರಾಜಪ್ಪ ದಳವಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT