ಮಂಗಳವಾರ, ಮೇ 18, 2021
30 °C

ಯುವ ಕಾಂಗ್ರೆಸ್‌ನ ಉಪಾಧ್ಯಕ್ಷೆಗೆ ಜೀವ ಬೆದರಿಕೆ: ನಲ‍ಪಾಡ್ ವಿರುದ್ಧ ಕೇಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷೆ ಭವ್ಯಾ ಅವರಿಗೆ ಜೀವ ಬೆದರಿಕೆ ಹಾಕಿರುವ ಆರೋಪದಡಿ ಶಾಸಕ ಎನ್‌.ಎ. ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ (ಎನ್‌ಸಿಆರ್) ದಾಖಲಾಗಿದೆ.

‘ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಸಂಜೆ ನಡೆದ ಘಟನೆ ಉಲ್ಲೇಖಿಸಿ ಭವ್ಯಾ ಅವರು ಮೂರು ಪುಟಗಳ ದೂರು ನೀಡಿದ್ದಾರೆ. ಅದರನ್ವಯ ಎನ್‌ಸಿಆರ್ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ಹೇಳಿದರು.

‘ಕಾಂಗ್ರೆಸ್ ಭವನದಲ್ಲಿ ಕೋವಿಡ್ ವಾರ್ ರೂಮ್ ನಿರ್ಮಾಣ ಮಾಡುತ್ತಿರುವಾಗಲೇ ಗಲಾಟೆ ಆಗಿದೆ. ಇದೇ ಸಂದರ್ಭದಲ್ಲೇ ಮೊಹಮ್ಮದ್ ನಲಪಾಡ್ ಹಾಗೂ ಇತರರು, ಭವ್ಯಾ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಗತಿ ದೂರಿನಲ್ಲಿದೆ’ ಎಂದೂ ತಿಳಿಸಿದರು.

‘ಬಸವಕಲ್ಯಾಣದಲ್ಲಿ ನಡೆದ ಉಪ ಚುನಾವಣಾ ಪ್ರಚಾರದ ವೇಳೆಯಲ್ಲೂ ಭವ್ಯಾ ಅವರಿಗೆ ಕಿರುಕುಳ ನೀಡಲಾಗಿದೆ. ದೆಹಲಿಯಲ್ಲೂ ಅವರಿಗೆ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಆರೋಪಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡುವಂತೆ ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಭವ್ಯಾ  ದೂರಿನಲ್ಲಿ ಕೋರಿದ್ದಾರೆ’ ಎಂದೂ ಪೊಲೀಸರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು