ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಸಳೆ ಕಣ್ಣಿರು ಸುರಿಸುವ ಸಿದ್ದರಾಮಯ್ಯ ನಕಲಿ ಚಾಂಪಿಯನ್‌: ನಳಿನ್ ಕುಮಾರ್‌

Last Updated 20 ಆಗಸ್ಟ್ 2020, 20:58 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದುಳಿದವರು ಮತ್ತು ದಲಿತರ ಬಗ್ಗೆ ಮೊಸಳೆ ಕಣ್ಣಿರು ಸುರಿಸುವ ಸಿದ್ದರಾಮಯ್ಯ ನಕಲಿ ಚಾಂಪಿಯನ್. ಇವರ ಆಷಾಢಭೂತಿತನವನ್ನು ಬಯಲು ಮಾಡಬೇಕಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಹೇಳಿದ್ದಾರೆ.

‘ಇವರು ಮುಖ್ಯಮಂತ್ರಿ ಆಗಿದ್ದಾಗ 2013 ರಿಂದ 2018ರ ಅವಧಿಯಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ 28 ಹಿಂದೂ ಯುವಕರ ಕಗ್ಗೊಲೆಗಳು ನಡೆದವು. ಈ ಕೃತ್ಯ ನಡೆಸಿದ್ದು ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳು. ಇದಕ್ಕೆ ಪೂರಕವಾಗಿ ಹತ್ಯೆ ನಡೆದ ಪ್ರದೇಶಗಳ ಪೊಲೀಸ್‌ ಠಾಣೆಗಳಲ್ಲಿ ಈ ಸಂಘಟನೆಗಳ ವಿರುದ್ಧ ಆರೋಪ ಪಟ್ಟಿಗಳು ದಾಖಲಾಗಿವೆ. ಆದರೆ, ಸಂಘಟನೆಗಳ ಮೇಲಿದ್ದ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದರು’ ಎಂದು ತಿಳಿಸಿದ್ದಾರೆ.

‘ಮುಸ್ಲಿಂ ಮತಾಂಧ ಸಂಘಟನೆಗಳಿಂದ ಹತ್ಯೆಗೀಡಾದ ಹಿಂದೂ ಯುವಕರು ಹಿಂದುಳಿದ ವರ್ಗಗಳಿಗೆ ಸೇರಿದವರು. ಇವರ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳುವ ವಿಶಾಲ ಹೃದಯ ಸಿದ್ದರಾಮಯ್ಯ ಅವರಿಗೆ ಇರಲಿಲ್ಲ. ದಲಿತ ವರ್ಗಕ್ಕೆ ಸೇರಿದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಇಟ್ಟರೂ ಖಂಡನೆ ಕೂಡ ಮಾಡಿಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.

‘ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ‘ಸೆಕ್ಯುಲರ್‌’ ಮತಗಳು ವಿಭಜನೆ ಆಗಬಾರದು ಎಂದು ಅಂದಿನ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಎಸ್‌ಡಿಪಿಐ ಜತೆ ಹೊಂದಾಣಿಕೆ ಮಾಡಿಕೊಂಡಿದ್ದರು’ ಎಂದರು.

ಕಾಂಗ್ರೆಸ್‌ಗೆ ಜನರೂ ಇಲ್ಲ, ಧ್ವನಿಯೂ ಇಲ್ಲ: ಬಿಜೆಪಿ
‘ಕಾಂಗ್ರೆಸ್‌ ಪಕ್ಷಕ್ಕೆ ಜನರೂ ಇಲ್ಲ, ಧ್ವನಿಯೂ ಇಲ್ಲ. ಸುಳ್ಳು ಸುದ್ದಿಗಳ ಪ್ರಚಾರಗಳ ಮೂಲಕ ಜನರ ದಾರಿ ತಪ್ಪಿಸುತ್ತಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ‘ಜನಧ್ವನಿ’ ಹೆಸರಿನಲ್ಲಿ ನಡೆಸಿದ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಜನರ ಹಿತಕ್ಕಾಗಿ, ಅವರ ಅಭಿವೃದ್ಧಿಗಾಗಿ ಯಾವುದೇ ಯೋಜನೆಗಳನ್ನು ಹಮ್ಮಿಕೊಳ್ಳುವುದು ಬೇಡವಾಗಿದೆ’ ಎಂದು ತಿಳಿಸಿದ್ದಾರೆ. ‘ಭೂಸುಧಾರಣೆ ತಿದ್ದುಪಡಿ ಕಾಯ್ದೆ ಐತಿಹಾಸಿಕವಾದುದು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಇದರಿಂದ ಕೈಗಾರಿಕೆ ಮತ್ತು ಕೃಷಿ ಕ್ಷೇತ್ರಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ರೈತರಿಗೂ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT