ಸೋಮಶೇಖರ್ ಕಾರ್ಯಶೈಲಿ: ಕಟೀಲ್ ಮೆಚ್ಚುಗೆ

ಮೈಸೂರು: ‘ಸರ್ಕಾರದ ನಿರ್ದೇಶನ ಪಾಲಿಸುವಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಂಪುಟದಲ್ಲಿಯೇ ಮೊದಲಿಗರಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಶ್ಲಾಘಿಸಿದರು.
ಮೈಸೂರು ಗ್ರಾಮಾಂತರ ವಿಭಾಗದ ಎಂಟು ವಿಧಾನಸಭಾ ಕ್ಷೇತ್ರಗಳ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ‘ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸೋಮಶೇಖರ್ ಜಿಲ್ಲೆಯ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರಗಳಿಗೆ ಹಾಗೂ ವಿವಿಧ ಜಿಲ್ಲೆಗಳಿಗೆ ತೆರಳಿದಾಗ ಪಕ್ಷದ ಕಚೇರಿಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಕಾರ್ಯಕರ್ತರ ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸುವ ಕೆಲಸವನ್ನು ಅತ್ಯಂತ ಶಿಸ್ತುಬದ್ಧವಾಗಿ ಮಾಡುತ್ತಿದ್ದಾರೆ’ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ‘ನಾನು ಎರಡು ಬಾರಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನನ್ನನ್ನೂ ಒಳಗೊಂಡಂತೆ, ಹಿಂದಿನ ಎಲ್ಲ ಉಸ್ತುವಾರಿ ಸಚಿವರಿಗಿಂತ ಸೋಮಶೇಖರ್ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಕಾರ್ಯಕರ್ತರಿಗೆ ಸುಲಭವಾಗಿ ಲಭಿಸುವ ಸಚಿವರಾಗಿದ್ದಾರೆ’ ಎಂದು ಶ್ಲಾಘಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.