ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಹಾನ್ಸ್: ಇದೇ 18ರಂದು ‘ನಮನ್’ ಕಾರ್ಯಕ್ರಮಕ್ಕೆ ಚಾಲನೆ

Published 16 ಡಿಸೆಂಬರ್ 2023, 15:39 IST
Last Updated 16 ಡಿಸೆಂಬರ್ 2023, 15:39 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣ ಮಟ್ಟದಲ್ಲಿ ಸರ್ವಾಂಗೀಣ ಮಾನಸಿಕ ಆರೋಗ್ಯ ವೃದ್ಧಿಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಹಮ್ಮಿಕೊಂಡಿರುವ ‘ನಮನ್’ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ಸಿಗಲಿದೆ. 

ಹಸ್ತ ಟ್ರಸ್ಟ್ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪ್ರಾಯೋಗಿಕವಾಗಿ ದೇಶದ ಎರಡು ತಾಲ್ಲೂಕುಗಳಲ್ಲಿ ಕಾರ್ಯಕ್ರಮವನ್ನು ಜಾರಿ ಮಾಡಲಾಗುತ್ತಿದೆ. ಕರ್ನಾಟಕದ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ಹಾಗೂ ಉತ್ತರಾಖಂಡದ ಪಿತೋರಘರ್ ಜಿಲ್ಲೆಯ ಮುನ್ಸಿಯಾರಿ ತಾಲ್ಲೂಕನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜನನದಿಂದ ಮರಣದವರೆಗೆ ಎಲ್ಲ ವಯೋಮಾನದವರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಂಸ್ಥೆ ಹೇಳಿದೆ. 

‘ಈ ಕಾರ್ಯಕ್ರಮವು ಮೂರು ವರ್ಷಗಳಲ್ಲಿ ಸಂಪೂರ್ಣಗೊಳ್ಳಲಿದ್ದು, ಕರ್ನಾಟಕ ಹಾಗೂ ಉತ್ತರಾಖಂಡ ಸರ್ಕಾರದ ಆರೋಗ್ಯ ಇಲಾಖೆಯ ಸಹಕಾರ ಪಡೆದುಕೊಳ್ಳಲಾಗಿದೆ. ಮಾನಸಿಕ ಅನಾರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ, ಚಿಕಿತ್ಸೆ ಹಾಗೂ ಪುನರ್ವಸತಿಗೆ ಈ ಕಾರ್ಯಕ್ರಮದಲ್ಲಿ ಆದ್ಯತೆ ನೀಡಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT