ಶುಕ್ರವಾರ, ಫೆಬ್ರವರಿ 21, 2020
17 °C

ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ: ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ಮುಂಬರುವ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಶಿಕ್ಷಕರ ಹೆಸರುಗಳನ್ನು ಮತ್ತೆ ಸೇರ್ಪಡೆ ಸಂಬಂಧ ತಹಶೀಲ್ದಾರ್ ಶನಿವಾರ ಸಭೆ ನಡೆಸಿದರು. 

‘ತಾಲ್ಲೂಕು ವ್ಯಾಪ್ತಿಯಲ್ಲಿ ಶೇ 15ರಿಂದ ಶೇ 20ರಷ್ಟು ಹೆಸರುಗಳು ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು, ಚುನಾವಣಾ ಆಯೋಗ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ’ಎಂದು ತಹಶೀಲ್ದಾರ್‌ ಎಸ್. ರಘುಮೂರ್ತಿ ತಿಳಿಸಿದರು. 

‘ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮತ್ತೆ ಪಟ್ಟಿಯನ್ನು ಪರಿಷ್ಕರಿಸಬೇಕಾಗಿದೆ’ ಎಂದರು. 

ಕ್ಷೇತ್ರಶಿಕ್ಷಣಾಧಿಕಾರಿ ಕಮಲಾಕರ್, ‘ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳಿಗೆ ಅನುಗುಣವಾಗಿ ಶಿಕ್ಷಕರು ವಾಸಿಸುತ್ತಿರುವ ಪ್ರದೇಶಗಳ ಆಧಾರದ ಮೇಲೆ ಈಗಾಗಲೇ ತಾತ್ಕಾಲಿಕ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ವಾಸಸ್ಥಳ ಪ್ರಮಾಣಪತ್ರದ ಆಧಾರದ ಮೇಲೆ ಉಳಿದ ಶಿಕ್ಷಕರ ಹೆಸರು ಸೇರಿಸಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು