ಬೆಂಗಳೂರು: ‘ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಲು ಐವರು ಪ್ರಮುಖ ವ್ಯಕ್ತಿಗಳನ್ನು ‘ನಮ್ಮ ಬೆಂಗಳೂರು ಐಕಾನ್ಸ್’ಗಳಾಗಿ ನೇಮಕ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
‘ನಮ್ಮ ಬೆಂಗಳೂರು ಐಕಾನ್ಸ್’ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ವ್ಯವಸ್ಥಿತವಾಗಿ ಮತದಾನ ಮಾಡುವಸಲುವಾಗಿ 10 ದಿನಗಳ ಮುಂಚಿತವಾಗಿಯೇ ಮತದಾನದ ಚೀಟಿ ಹಾಗೂ
ಮತಗಟ್ಟೆಯ ಮಾಹಿತಿ ನೀಡಲಾಗುವುದು. ಇಲ್ಲವೇ ವಿ.ಎಚ್.ಎ ತಂತ್ರಾಂಶ
ದಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆ ನಮೂದಿಸಿದರೆ ಸಾಕು ಎಲ್ಲಾ ಮಾಹಿತಿ ಲಭ್ಯವಾಗಲಿದೆ ಎಂದರು.
ಮತ ಚಲಾಯಿಸುವುದು ಎಲ್ಲರ ಆದ್ಯ ಕರ್ತವ್ಯ. ಹಿಂದಿನ ದಿನಗಳಲ್ಲಿ ಮತದಾನ ಮಾಡುವ ದಿನ ಮತಗಟ್ಟೆಗಳ ಬಳಿ ಯಾವುದೇ ರೀತಿಯ ಸೌಲಭ್ಯಗಳು ಇರುತ್ತಿರಲಿಲ್ಲ. ಆದರೀಗ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಮತ ಚಲಾಯಿಸುವವರು ಕಡಿಮೆ. ನಿಮಗೆ ಮತ ಚಲಾಯಿಸಲು ಇಷ್ಟವಿಲ್ಲದಿದ್ದರೆ ನೋಟ ಮಾಡಲು ಅವಕಾಶವಿರುತ್ತದೆ. ಆದ್ದರಿಂದ ಎಲ್ಲರೂ ಮತ ಚಲಾಯಿಸಲು ಮನವಿ ಮಾಡಿದರು.
ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಮಾತನಾಡಿ, ‘ಮುಂಬರುವ ಚುನಾವಣೆಯಲ್ಲಿ ಮತದಾರರು ಉತ್ತಮ ರೀತಿಯಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು’ ಎಂದು ತಿಳಿಸಿದರು.
ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಡಾ. ಹರೀಶ್ ಕುಮಾರ್, ಡಾ. ಜಗದೀಶ್ ನಾಯ್ಕ್, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಚುನಾವಣಾ ವಿಭಾಗದ ಉಪ ಆಯುಕ್ತ ಉಮೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.