ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮ ಕ್ಲಿನಿಕ್‌’ಗಳಲ್ಲಿ ರಾತ್ರಿ 8ರವರೆಗೆ ಸೇವೆ

Published 9 ಆಗಸ್ಟ್ 2023, 15:26 IST
Last Updated 9 ಆಗಸ್ಟ್ 2023, 15:26 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಇಲಾಖೆಯು ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್‌’ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲು ಮುಂದಾಗಿದೆ. 

ಸದ್ಯ ನಮ್ಮ ಕ್ಲಿನಿಕ್‌ಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಸೇವೆ ನೀಡುತ್ತಿವೆ. ಇದರಿಂದಾಗಿ ಕೂಲಿ ಕಾರ್ಮಿಕರು ಹಾಗೂ ಉದ್ಯೋಗಸ್ಥರಿಗೆ ಸಮರ್ಪಕವಾಗಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಇಲಾಖೆಗೆ ಬಂದಿದ್ದವು. ಹೀಗಾಗಿ, ಈ ಬಗ್ಗೆ ಅಧಿಕಾರಿಗಳ ಜತೆಗೆ ಚರ್ಚಿಸಿರುವ ಸಚಿವ ದಿನೇಶ್ ಗುಂಡೂರಾವ್, ಸಂಜೆ ಸೇವೆ ಒದಗಿಸುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

‘ನಮ್ಮ ಕ್ಲಿನಿಕ್‌ಗಳಲ್ಲಿ ಎರಡು ಪಾಳಿಯಂತೆ ದಿನಪೂರ್ತಿ ಸೇವೆ ಒದಗಿಸಿದರೆ ಹೆಚ್ಚಿನ ವೈದ್ಯರು, ತಂತ್ರಜ್ಞರು ಹಾಗೂ ಸಿಬ್ಬಂದಿ ಬೇಕಾಗುತ್ತದೆ. ಈಗ ವೈದ್ಯರು ಸೇರಿ ಅಗತ್ಯ ಸಿಬ್ಬಂದಿ ಕೊರತೆ ಇರುವುದರಿಂದ ಎರಡು ಪಾಳಿ ಮಾಡುವ ಬದಲು, ಈಗಿರುವ ಸಮಯ ಬದಲಿಸಿ, ಸೇವೆ ನೀಡಲು ಸಚಿವರು ಸೂಚನೆ ನೀಡಿದ್ದಾರೆ. ಶೇ 25 ರಷ್ಟು ಕ್ಲಿನಿಕ್‌ಗಳಲ್ಲಿ ಮಾತ್ರ ಸಮಯ ಬದಲಾವಣೆ ಮಾಡಲಾಗುತ್ತದೆ. ಜನರ ಪ್ರತಿಕ್ರಿಯೆ ಆಧರಿಸಿ ಮುಂದಿನ ದಿನಗಳಲ್ಲಿ ಇತರ ಕ್ಲಿನಿಕ್‌ಗಳ ಸಮಯ ಬದಲಿಸಲಾಗುವುದು’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು. 

‘ರಾಜ್ಯದಲ್ಲಿ 415 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈವರೆಗೆ 96 ಸಾವಿರ ಮಹಿಳೆಯರು ಹಾಗೂ 4.21 ಲಕ್ಷ ಪುರುಷರು ಸೇರಿ 5 ಲಕ್ಷಕ್ಕೂ ಅಧಿಕ ಮಂದಿ ಸೇವೆ ಪಡೆದುಕೊಂಡಿದ್ದಾರೆ. ನಿತ್ಯ ಸರಾಸರಿ 35 ರಿಂದ 40 ಜನರು ಈ ಕ್ಲಿನಿಕ್‌ಗಳಿಗೆ ಭೇಟಿ ನೀಡುತ್ತಿದ್ದಾರೆ. 2.88 ಲಕ್ಷ ಜನರು ರಕ್ತ ಪರೀಕ್ಷೆ ಸೇರಿ ವಿವಿಧ ರೋಗಪರೀಕ್ಷೆಗಳನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT