ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ದೊಡ್ಡಜಾಲ ಗ್ರಾಮ ಪಂಚಾಯಿತಿ ವತಿಯಿಂದ ಸಾದಹಳ್ಳಿ ಗೇಟ್ ಸಮೀಪ ನಿರ್ಮಿಸಿರುವ‘ನಮ್ಮ ಮೆಡಿಕಲ್ಸ್’ ಔಷಧಿ ಅಂಗಡಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಭಾನುವಾರ ಉದ್ಘಾಟಿಸಿದರು.

‘ಗ್ರಾಮ ಪಂಚಾಯಿತಿಯಿಂದ ಸ್ಥಾಪಿಸಿರುವ ಮೊದಲ ಔಷಧಿ ಅಂಗಡಿ ಇದಾಗಿದೆ. ಖಾಸಗಿ ಔಷಧ ಮಳಿಗೆಗಳಲ್ಲಿ ಜನರಿಕ್ ಸೇರಿದಂತೆ ಸಾವಿರಕ್ಕೂ ಹೆಚ್ಚು ಔಷಧಿಗಳು ಶೇ 30ರಿಂದ 40ರಷ್ಟು ರಿಯಾಯಿತಿಯಲ್ಲಿ ದೊರೆಯಲಿವೆ’ ಎಂದುಅಧಿಕಾರಿಗಳು ಮಾಹಿತಿ ನೀಡಿದರು.

ಆಟೋ ನಿಲ್ದಾಣದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೂ ಇದೇ ವೇಳೆ ಚಾಲನೆ ನೀಡಲಾಯಿತು.

ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಬಹುತೇಕ ಗ್ರಾಮ ಪಂಚಾಯಿತಿಗಳು ಸರ್ಕಾರದ ಮೇಲೆ ಅವಲಂಬಿತವಾಗಿವೆ. ಈ ಗ್ರಾಮ ಪಂಚಾಯಿತಿ ಸ್ವಾವಲಂಬಿಯಾಗಿರುವುದು ಸಂತಸದ ಸಂಗತಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.