ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Namma Metro | ಮೆಟ್ರೊ ಪ್ರಯಾಣಿಕರೇ ಗಮನಿಸಿ: ಭಾನುವಾರ ಸಂಚಾರದಲ್ಲಿ ವ್ಯತ್ಯಯ

Published 30 ಜೂನ್ 2023, 11:48 IST
Last Updated 30 ಜೂನ್ 2023, 11:48 IST
ಅಕ್ಷರ ಗಾತ್ರ

ಬೆಂಗಳೂರು: ಭಾನುವಾರ ಮೆಟ್ರೊ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ, ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮವು ತಿಳಿಸಿದೆ.

ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೊ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT