ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಮೆಟ್ರೊ: ಜ.26–28ರವರೆಗೆ ‘ಈ’ ನಿಲ್ದಾಣಗಳ ನಡುವೆ ರೈಲು ಸಂಚಾರ ಸ್ಥಗಿತ

Published 25 ಜನವರಿ 2024, 10:55 IST
Last Updated 25 ಜನವರಿ 2024, 10:55 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಮೆಟ್ರೊದ ಹಸಿರು ಮಾರ್ಗದ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು 3 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದ ಪೂರ್ವ ನಿಯೋಜಿತ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ, ಜ.26ರಿಂದ 28ರವರೆಗೆ ಮೆಟ್ರೊ ರೈಲು ಸೇವೆಗಳು ಲಭ್ಯವಿರುವುದಿಲ್ಲ ಎಂದು ಹೇಳಿದೆ.

ಈ ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವಿನ ರೈಲು ಸಂಚಾರ ಎಂದಿನಂತೆ ಇರಲಿದೆ. ನೇರಳೆ ಬಣ್ಣದ ಮಾರ್ಗದಲ್ಲೂ ಯಾವುದೇ ವ್ಯತ್ಯಯ ಇರುವುದಿಲ್ಲ.

ಜ. 29ರ ಬೆಳಿಗ್ಗೆ 5 ಗಂಟೆಯಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಸೇವೆಗಳು ಪುನರಾರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಈ ಮೂರು ದಿನ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ, ವಾಟ್ಸ್‌ಆ್ಯಪ್, ನಮ್ಮ ಮೆಟ್ರೊ ಅಥವಾ ಇತರ ಅಪ್ಲಿಕೇಶನ್‌ಗಳ ಮೂಲಕ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಿ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT