ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಟಿಕೆಟ್ ಪಡೆದಿದ್ದವರಲ್ಲಿ 22 ಸಾವಿರ ಜನರು ನಮ್ಮ ಮೆಟ್ರೊದಲ್ಲಿ ಸಂಚರಿಸಿದ್ದಾರೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಐಪಿಎಲ್ ಟಿಕೆಟ್ನಲ್ಲಿ ಮೆಟ್ರೊ ಕ್ಯೂಆರ್ ಕೋಡ್ಗಳನ್ನು ಅಳವಡಿಸಲಾಗಿತ್ತು. ಪ್ರೇಕ್ಷಕರು ಯಾವುದೇ ಮೆಟ್ರೊ ನಿಲ್ದಾಣದಿಂದ ಕಬ್ಬನ್ ಪಾರ್ಕ್ ಹಾಗೂ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದವರೆಗೆ ಉಚಿತವಾಗಿ ಪ್ರಯಾಣ ಮಾಡಲು, ಪಂದ್ಯ ನಂತರ ವಾಪಸ್ಸಾಗಲು ಅವಕಾಶ ಕಲ್ಪಿಸಲಾಗಿತ್ತು.

ಶನಿವಾರ ರಾತ್ರಿ 11.05ರಿಂದ ಸುಮಾರು 50 ನಿಮಿಷಗಳಲ್ಲಿ 22 ಸಾವಿರಕ್ಕೂ ಅಧಿಕ ಮಂದಿ ಪ್ರಯಾಣಿಸಿದ್ದರು. ಪಂದ್ಯ ಮುಗಿಯುವ ಮೊದಲು ರೈಲುಗಳನ್ನು ಎರಡೂ ದಿಕ್ಕುಗಳಲ್ಲಿ ಸಿದ್ಧಪಡಿಸಿ, ನಂತರ ಮೂರು ನಿಮಿಷಗಳ ಅಂತರದಲ್ಲಿ ಸಂಚಾರ ಒದಗಿಸಲಾಯಿತು.

ಈ ಅವಧಿಯಲ್ಲಿ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆಗೆ 13 ರೈಲುಗಳು ಹಾಗೂ ವೈಟ್ಫೀಲ್ಡ್ ಕಡೆಗೆ 9 ರೈಲುಗಳು ಸಂಚರಿಸಿದವು. ಒಟ್ಟು 39 ರೌಂಡ್ ಟ್ರಿಪ್ಗಳನ್ನು ನಡೆಸಲಾಗಿದ್ದು, ಅವುಗಳಲ್ಲಿ ನೇರಳೆ ಮಾರ್ಗದಲ್ಲಿ 18, ಹಸಿರು ಮಾರ್ಗದಲ್ಲಿ 15 ಮತ್ತು ಹಳದಿ ಮಾರ್ಗದಲ್ಲಿ 6 ಟ್ರಿಪ್ ನಡೆಸಲಾಯಿತು.

ಬೆಂಗಳೂರು ನಗರ ಪೊಲೀಸರು ಮತ್ತು ಬಿಎಂಆರ್ಸಿಎಲ್ ಸಿಬ್ಬಂದಿಯಿಂದ ಪಡೆದ ಪ್ರತಿಕ್ರಿಯೆಗಳ ಆಧಾರದ ಮೇಲೆ, ಮುಂದಿನ ಪಂದ್ಯಗಳಿಗೆ ಹೆಚ್ಚಿನ ಸೌಲಭ್ಯಗಳು ಮತ್ತು ಕ್ರಮಗಳನ್ನು ಇನ್ನಷ್ಟು ಬಲಪಡಿಸಲು ನಿರ್ಧರಿಸಲಾಯಿತು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರೇಕ್ಷಕರು ಮುಂದಿನ ಐಪಿಎಲ್ ಪಂದ್ಯಗಳ ವೀಕ್ಷಣೆಗೆ ತೆರಳಲು ಮೆಟ್ರೊವನ್ನು ಬಳಸಬೇಕು. ಸಮೀಪದ ಮೆಟ್ರೊ ನಿಲ್ದಾಣಗಳಲ್ಲಿ ವಾಹನಗಳನ್ನು ನಿಲ್ಲಿಸಿ ಸುಗಮವಾಗಿ ಮತ್ತು ಸುರಕ್ಷಿತವಾಗಿ ಪ್ರಯಾಣವನ್ನು ಆಯ್ಕೆ ಮಾಡಿಕೊಳ್ಳಬೇಕು. ಬಿಐಇಸಿ, ಕರ್ನಾಟಕ ಟ್ರೇಡ್ ಪ್ರಮೋಶನ್ ಆರ್ಗನೈಜೇಶನ್ (ಕೆಟಿಪಿಒ), ವೈಟ್ಫೀಲ್ಡ್ ಮುಂತಾದ ಸ್ಥಳಗಳಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಿಗೂ ಮೆಟ್ರೊ ಬಳಸುವಂತೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.