ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿರು ಮಾರ್ಗ: ಇಂದು ಮೆಟ್ರೊ ಸಂಚಾರ ಪುನರಾರಂಭ

Published 28 ಜನವರಿ 2024, 23:30 IST
Last Updated 28 ಜನವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಣೆ ಮಾರ್ಗದ ಪೂರ್ವ ನಿಯೋಜಿತ ಕಾಮಗಾರಿ ಭಾನುವಾರ ಪೂರ್ಣಗೊಂಡಿದ್ದು, ಮೂರು ದಿನಗಳಿಂದ ಸ್ಥಗಿತಗೊಂಡಿದ್ದ ನಾಗಸಂದ್ರ– ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವಿನ ಮೆಟ್ರೊ ರೈಲು ಸಂಚಾರ ಸೋಮವಾರ ಪುನರಾರಂಭಗೊಳ್ಳಲಿದೆ.

ಈ ಮಾರ್ಗದಲ್ಲಿ ಎಲೆಕ್ಟ್ರಿಕ್‌ ಕೆಲಸಗಳನ್ನು ಜ.26ರಿಂದ ಹಮ್ಮಿಕೊಳ್ಳಲಾಗಿತ್ತು. ಅದಕ್ಕಾಗಿ ಹಸಿರುಮಾರ್ಗದಲ್ಲಿ ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರವರೆಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT