ಮಂಗಳವಾರ, ಮಾರ್ಚ್ 28, 2023
30 °C

‘ನಮ್ಮ ಮೆಟ್ರೊ’ ಸಂಚಾರ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನೇರಳೆ ಮಾರ್ಗದಲ್ಲಿ ಸೋಮವಾರದಿಂದ ‘ನಮ್ಮ ಮೆಟ್ರೊ’ ರೈಲು ಸಂಚಾರ ಐದೂವರೆ ತಿಂಗಳ ಬಳಿಕ ಪು‌ನರಾರಂಭವಾಗಲಿದೆ. 

ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್‌ಸಿಎಲ್‌) ಮಾ.22ರಿಂದ ‘ನಮ್ಮ ಮೆಟ್ರೊ’ ವಾಣಿಜ್ಯ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. 

‘ಕೋವಿಡ್‌ ಸೋಂಕು ಹರಡುವುದನ್ನು ತಡೆಯಲು ಕೆಲವು ನಿರ್ಬಂಧಗಳೊಂದಿಗೆ ಮೆಟ್ರೊ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಪ್ರಯಾಣಿಕರು ಮಾಸ್ಕ್‌ ಧರಿಸಿಕೊಂಡು ಸುರಕ್ಷಿತ ಅಂತರ ಕಾಪಾಡಿಕೊಂಡು ಪ್ರಯಾಣಿಸಬೇಕು’ ಎಂದು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಎಲ್ಲ ನಿಲ್ದಾಣಗಳನ್ನು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ. ಅಣಕು ಕಾರ್ಯಾಚರಣೆ ನಡೆಸುವ ಮೂಲಕ ಸುರಕ್ಷಿತ ಪ್ರಯಾಣಕ್ಕೆ ಕ್ರಮಕೈಗೊಳ್ಳಲಾಗಿದೆ’ ಎಂದರು.

‘ಮೆಟ್ರೊ ನಿಲ್ದಾಣಗಳಲ್ಲಿ ಎಲ್ಲ ಪ್ರವೇಶ ದ್ವಾರಗಳು ತೆರೆದಿರುವುದಿಲ್ಲ. ಪ್ರವೇಶ ದ್ವಾರದ ಬಳಿಯೇ ಪ್ರಯಾಣಿಕರ ದೇಹದ ಉಷ್ಣಾಂಶ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಜ್ವರದ ಲಕ್ಷಣ ಇರುವವರ ಪ್ರಯಾಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ತಿಳಿಸಿದರು.

ಮೆಟ್ರೊ ನಿಲ್ದಾಣಗಳಲ್ಲಿ ರೈಲು ಕನಿಷ್ಠ 60 ಸೆಕೆಂಡ್‌ ಹಾಗೂ ಇಂಟರ್‌ಚೇಂಜ್‌ ನಿಲ್ದಾಣಗಳಲ್ಲಿ 75 ಸೆಕೆಂಡ್‌ ನಿಲ್ಲಲಿದೆ. ದಟ್ಟಣೆಯ ಸಮಯದಲ್ಲಿ 5 ನಿಮಿಷಕ್ಕೊಂದು, ಉಳಿದ ಅವಧಿಯಲ್ಲಿ 10 ನಿಮಿಷಕ್ಕೊಂದು ರೈಲು ಸಂಚರಿಸಲಿದೆ. ಕಂಟೈನ್‌ಮೆಂಟ್‌ ಪ್ರದೇಶದಲ್ಲಿರುವ ಮೆಟ್ರೊ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು