ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಮೆಟ್ರೊ: ಕೌಂಟರ್‌ನಲ್ಲೇ ಸ್ಮಾರ್ಟ್‌ಕಾರ್ಡ್‌ ರಿಚಾರ್ಜ್‌ಗೆ ಅವಕಾಶ

Last Updated 17 ನವೆಂಬರ್ 2020, 11:04 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮ ಮೆಟ್ರೊ’ ನಿಲ್ದಾಣಗಳ ಟಿಕೆಟ್‌ ಕೌಂಟರ್‌ನಲ್ಲಿಯೇ ಹಳೆಯ ಸ್ಮಾರ್ಟ್‌ ಕಾರ್ಡ್‌ ರಿಚಾರ್ಜ್ ಮಾಡಿಸುವ ಸೌಲಭ್ಯವನ್ನು ಬೆಂಗಳೂರು ಮೆಟ್ರೊ ರೈಲು ನಿಗಮವು ಮಂಗಳವಾರ ಮಧ್ಯಾಹ್ನದಿಂದ ಪುನರಾರಂಭಿಸಿದೆ.

ಪರಸ್ಪರ ಸಂಪರ್ಕ ಕಡಿಮೆಗೊಳಿಸುವ ಉದ್ದೇಶದಿಂದ ಕೌಂಟರ್‌ನಲ್ಲಿ ಸ್ಮಾರ್ಟ್‌ಕಾರ್ಡ್‌ ರಿಚಾರ್ಜ್‌ಗೆ ಅವಕಾಶ ನೀಡಿರಲಿಲ್ಲ. ಟೋಕನ್‌ ವಿತರಣೆ ಕೂಡ ಸ್ಥಗಿತಗೊಳಿಸಲಾಗಿತ್ತು. ನಿಗಮದ ವೆಬ್‌ಸೈಟ್‌ ಅಥವಾ ಆ್ಯಪ್‌ ಮೂಲಕ ಪ್ರಯಾಣಕ್ಕೂ ಒಂದು ತಾಸು ಮುಂಚೆಯೇ ಸ್ಮಾರ್ಟ್‌ಕಾರ್ಡ್‌ ರಿಚಾರ್ಜ್‌ ಮಾಡಬೇಕಾಗಿತ್ತು. ಇಲ್ಲವೇ, ನಿಲ್ದಾಣದಲ್ಲಿ ಹೊಸ ಸ್ಮಾರ್ಟ್‌ಕಾರ್ಡ್‌ ಖರೀದಿಸಬೇಕಾಗಿತ್ತು.

‘ಸ್ಮಾರ್ಟ್‌ಕಾರ್ಡ್‌ ರಿಚಾರ್ಜ್‌ ನಿರ್ಬಂಧಗಳಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿತ್ತು. ಒಂದು ತಾಸು ಕಾಯಬೇಕಾಗಿದ್ದರಿಂದ ಬಹುತೇಕ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಈಗ ಹಳೆಯ ಸ್ಮಾರ್ಟ್‌ಕಾರ್ಡ್‌ಗಳನ್ನು ಕೌಂಟರ್‌ನಲ್ಲಿಯೇ ರಿಚಾರ್ಜ್‌ ಮಾಡಬಹುದು. ಆದರೆ, ನಗದು ಸ್ವೀಕರಿಸುವುದಿಲ್ಲ. ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮೂಲಕ, ಪೇಟಿಎಂ ಅಥವಾ ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡುವ ಮೂಲಕ ಶುಲ್ಕ ಪಾವತಿಸಿ ರಿಚಾರ್ಜ್‌ ಮಾಡಿಸಿಕೊಳ್ಳಬಹುದು’ ಎಂದು ನಿಗಮದ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT