ಬೆಂಗಳೂರು: ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಸುರಂಗ ಕಾರಿಡಾರ್ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜೆ. ರವಿಶಂಕರ್ ಶುಕ್ರವಾರ ಪರಿಶೀಲಿಸಿದರು.

ನಿಲ್ದಾಣ ನಿರ್ಮಾಣ, ಸುರಂಗ ಸಂಬಂಧಿತ ಕಾಮಗಾರಿಗಳು, ಹಳಿ ಅಳವಡಿಕೆ, ವಿವಿಧ ವ್ಯವಸ್ಥೆಗಳ ಸ್ಥಾಪನೆ ಹಾಗೂ ಇತರೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ಮಾರ್ಗವು ಬೆಂಗಳೂರಿನ ಉತ್ತರ–ದಕ್ಷಿಣ ಸಂಪರ್ಕವನ್ನು ಬಲಪಡಿಸಲಿದೆ. ಜೊತೆಗೆ ಪ್ರಮುಖ ಮುಖ್ಯ ರಸ್ತೆಗಳ ಮೇಲಿನ ಸಂಚಾರ ದಟ್ಟಣೆಯನ್ನು ತಗ್ಗಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಅದಕ್ಕೆ ವಿವಿಧ ವಿಭಾಗಗಳ ನಡುವೆ ಸಮನ್ವಯವನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಹಾಗೂ ಸ್ಥಳೀಯ ಎಂಜಿನಿಯರ್ಗಳಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.