ಬೆಂಗಳೂರು: ಹೊರ ವರ್ತುಲ ರಸ್ತೆ ಕಾರಿಡಾರ್ನಲ್ಲಿ ನಮ್ಮ ಮೆಟ್ರೊ ನೀಲಿ ಮಾರ್ಗದ ಬೆಳ್ಳಂದೂರು ಮೆಟ್ರೊ ನಿಲ್ದಾಣದ ನಾಮಕರಣ ಹಕ್ಕುಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಮತ್ತು ಪ್ರೆಸ್ಟೀಜ್ ಗ್ರೂಪ್ ನಡುವೆ ಶನಿವಾರ ಒಪ್ಪಂದ ನಡೆದಿದೆ.

ಈ ಒಪ್ಪಂದದಂತೆ, ವಾಣಿಜ್ಯ ಕಾರ್ಯಾಚರಣೆ ಪ್ರಾರಂಭವಾದ ದಿನದಿಂದ 30 ವರ್ಷ ‘ಪ್ರೆಸ್ಟೀಜ್ ಬೆಳ್ಳಂದೂರು ಮೆಟ್ರೊ ನಿಲ್ದಾಣ’ ಎಂದು ಹೆಸರು ಇರಲಿದೆ. ಒಪ್ಪಂದದ ಮೌಲ್ಯ ₹80 ಕೋಟಿ ಆಗಿದೆ. ಮೆಟ್ರೊ ನಿಲ್ದಾಣದಿಂದ ಪ್ರೆಸ್ಟೀಜ್ ಆವರಣಕ್ಕೆ ಸಂಪರ್ಕಿಸುವ ವಿಶೇಷ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ಆಯ್ಕೆ ಮಾಡಿದಲ್ಲಿ ಹೆಚ್ಚುವರಿ ₹ 10 ಕೋಟಿ ಪಾವತಿಸಬೇಕಾಗುತ್ತದೆ. ಇದರಿಂದ ಒಟ್ಟು ಸಹಭಾಗಿತ್ವದ ಮೌಲ್ಯ ₹90 ಕೋಟಿಯಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣ ದರಯೇತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮೆಟ್ರೊ ಜಾಲದ ಆರ್ಥಿಕ ಸ್ಥಿರತೆಯನ್ನು ಬಲಪಡಿಸುವ ಯೋಜನೆಯ ಭಾಗವಾಗಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಪ್ರಯಾಣಿಕರ ಸೌಕರ್ಯಗಳು ಮತ್ತು ಒಳಾಂಗಣ ಗುಣಮಟ್ಟವನ್ನು ಮೇಲ್ದರ್ಜೆಗೇರಲಿದೆ. ಬಿಎಂಆರ್ಸಿಎಲ್ನೊಂದಿಗೆ ಸಮನ್ವಯದೊಂದಿಗೆ ನಿಲ್ದಾಣದ ನಿರ್ವಹಣೆಯ ಜವಾಬ್ದಾರಿಯನ್ನು ಪ್ರೆಸ್ಟೀಜ್ ಗ್ರೂಪ್ ವಹಿಸಿಕೊಳ್ಳಲಿದೆ.

ನಿಲ್ದಾಣದ ನಾಮಕರಣ ಹಕ್ಕು, ಗರಿಷ್ಠ 1,000 ಚದರ ಅಡಿ ಒಳಾಂಗಣ ಜಾಹೀರಾತು ಹಕ್ಕು ಹಾಗೂ ನಿಲ್ದಾಣದ ಆವರಣದಲ್ಲಿ 3,000 ಚದರ ಅಡಿ ವಾಣಿಜ್ಯ ಸ್ಥಳದ ಹಂಚಿಕೆ ಒಪ್ಪಂದದಲ್ಲಿ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.