ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ಮೆಟ್ರೊ ರೈಲುಗಳ ಸೇವೆಗಳನ್ನು ವಿಸ್ತರಣೆಗೊಳಿಸಲಾಗಿದೆ. ಈ ಬಗ್ಗೆ ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ವರ್ಷದ ಸಂಭ್ರಮ-2026ರ ಅಂಗವಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೊ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಹೇಳಿದೆ.

ಕೊನೆಯ ರೈಲುಗಳು ಹೊರಡುವ ಸಮಯ: 2025ರ ಡಿಸೆಂಬರ್ 31ರಂದು ಮಧ್ಯರಾತ್ರಿಯ ನಂತರ, ಅಂದರೆ 1ನೇ ಜನವರಿ 2026ರಂದು ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಕೊನೆಯ ಮೆಟ್ರೊ ರೈಲುಗಳ ಸಮಯ ಹೀಗಿದೆ.

ನೇರಳೆ ಮಾರ್ಗ:

ವೈಟ್ ಫೀಲ್ಡ್ ನಿಂದ ಚಲ್ಲಘಟ್ಟದವರೆಗೆ: ಬೆಳಗಿನ ಜಾವ 1:45ರ ವರೆಗೆ

ಚಲ್ಲಘಟ್ಟದಿಂದ ವೈಟ್ಫೀಲ್ಡ್ ವರೆಗೆ: ಬೆಳಗಿನ ಜಾವ 2:00 ಗಂಟೆ ವರೆಗೆ

ಹಸಿರು ಮಾರ್ಗ:

ಮಾದಾವರದಿಂದ ರೇಷ್ಮೆ ಸಂಸ್ಥೆಯವರೆಗೆ: ಬೆಳಗಿನ ಜಾವ 2:00ರ ವರೆಗೆ

ರೇಷ್ಮೆ ಸಂಸ್ಥೆಯಿಂದ ಮಾದಾವರದ ವರೆಗೆ: ಬೆಳಗಿನ ಜಾವ 2:00ರ ವರೆಗೆ

ಹಳದಿ ಮಾರ್ಗ:

ಆರ್ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ: ಬೆಳಗಿನ ಜಾವ 3:10ರ ವರೆಗೆ

ಬೊಮ್ಮಸಂದ್ರದಿಂದ ಆರ್ವಿ ರಸ್ತೆಯವರೆಗೆ: ಬೆಳಗಿನಜಾವ 1:30ರವರೆಗೆ

ಕೆಂಪೇಗೌಡ (ಮೆಜೆಸ್ಟಿಕ್) ನಿಲ್ದಾಣದಿಂದ ಕೊನೆಯ ಮೆಟ್ರೊ ಹೊರಡುವ ಸಮಯ:

ನೇರಳೆ ಮಾರ್ಗದ ವೈಟ್ ಫೀಲ್ಡ್ ಮತ್ತು ಚಲ್ಲಘಟ್ಟ ಕಡೆಗೆ ಹಾಗೂ ಹಸಿರು ಮಾರ್ಗದ ಮಾದಾವರ ಮತ್ತು ರೇಷ್ಮೆ ಸಂಸ್ಥೆ ಕಡೆಗೆ ಹೊರಡುವ ಕೊನೆಯ ರೈಲು ಬೆಳಗಿನಜಾವ 2.45ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ನಿಂದ ಹೊರಡಲಿದೆ.

ರೈಲು ಸಂಚಾರದ ಅಂತರದ ಅವಧಿ:

31ನೇ ಡಿಸೆಂಬರ್ 2025ರ ರಾತ್ರಿ 11:30ರಿಂದ ವಿಸ್ತರಿತ ಸೇವೆ ಮುಗಿಯುವವರೆಗೂ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ ಹಾಗೂ ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ.

ಎಂ.ಜಿ ರಸ್ತೆ ನಿಲ್ದಾಣ ಬಂದ್:

ಎಂ.ಜಿ ರಸ್ತೆ ಪ್ರದೇಶದಲ್ಲಿ ಹೆಚ್ಚಿನ ಜನಸಂದಣಿ ನಿರೀಕ್ಷೆಯಿರುವುದರಿಂದ, 31ನೇ ಡಿಸೆಂಬರ್ 2025ರ ರಾತ್ರಿ 10:00ರಿಂದ ಎಂ.ಜಿ ರಸ್ತೆ ಮೆಟ್ರೊ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಆದರೆ, ರೈಲುಗಳು ಪಕ್ಕದ ನಿಲ್ದಾಣಗಳಾದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದ್ದು, ಪ್ರಯಾಣಿಕರು ಅಲ್ಲಿ ರೈಲನ್ನು ಹತ್ತಿ-ಇಳಿಯಬಹುದು ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಟಿಕೆಟ್ ಸಂಬಂಧಿತ ಸೂಚನೆ:

ಟಿಕೆಟ್ ಕೌಂಟರ್ಗಳಲ್ಲಿ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ, ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೊ ನಿಲ್ದಾಣಗಳಲ್ಲಿ ರಾತ್ರಿ 11:00ರ ನಂತರ ಟೋಕನ್ ಮಾರಾಟ ಇರುವುದಿಲ್ಲ. ಈ ನಿಲ್ದಾಣಗಳಿಂದ ರಾತ್ರಿ 11:00 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು ಕ್ಯೂಆರ್ ಟಿಕೆಟ್ಗಳ ಮೂಲಕ, ಮುಂಗಡವಾಗಿ ರಿಟರ್ನ್ ಟಿಕೆಟ್ ಖರೀದಿಸುವಂತೆ ಅಥವಾ ಸ್ಮಾರ್ಟ್ ಕಾರ್ಡ್ಗಳನ್ನು ಬಳಸುವಂತೆ ಸಲಹೆ ನೀಡಿದೆ.

ಪ್ರಯಾಣವನ್ನು ಮುಂಗಡವಾಗಿ ಯೋಜಿಸಿ

ಹೊಸ ವರ್ಷದ ಸಂಭ್ರಮದ ವೇಳೆ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಗಡವಾಗಿ ಯೋಜಿಸಿ, ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಮೆಟ್ರೊ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ನಿಗಮವು ಮನವಿ ಮಾಡಿದೆ.
.ಗಮನಿಸಿ: ಹೊಸ ವರ್ಷದಂದು ಈ ಮೆಟ್ರೊ ನಿಲ್ದಾಣ, ಫ್ಲೈ ಓವರ್ಗಳಲ್ಲಿ ಪ್ರವೇಶ ಇರಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.