ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮೆಟ್ರೊ ರೈಲು ಸಂಚಾರ ಫೆ.28ರಂದು ಭಾಗಶಃ ಸ್ಥಗಿತ

Last Updated 26 ಫೆಬ್ರುವರಿ 2021, 14:11 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮ ಮೆಟ್ರೊ’ದಲ್ಲಿನ ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 28ರ ಭಾನುವಾರ ಬೆಳಿಗ್ಗೆ 7ರಿಂದ 9ರವರೆಗೆ ಮೆಟ್ರೊ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಹೇಳಿದೆ.

ಈ ಅವಧಿಯಲ್ಲಿ ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಆದರೆ, ಎಂ.ಜಿ. ರಸ್ತೆ ನಿಲ್ದಾಣದಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಸಂಚಾರ ಎಂದಿನಂತಿರುತ್ತದೆ.

ದುರಸ್ತಿ ಕಾರ್ಯ ಪೂರ್ಣಗೊಂಡ ನಂತರ, ಅಂದರೆ 28ರ ಬೆಳಿಗ್ಗೆ 9ರ ನಂತರ ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭಗೊಳ್ಳಲಿದೆ.

ಹಸಿರು ಮಾರ್ಗದಲ್ಲಿ ಮೆಟ್ರೊ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ನಿಗಮ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT