ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15 ಮತ್ತು 24ರಂದು ನಡೆಯಲಿರುವ ಐಪಿಎಲ್ ಟಿ–20 ಕ್ರಿಕೆಟ್ ವೀಕ್ಷಣೆಗೆ ಬರುವ ಮೆಟ್ರೊ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೊ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.

ವೈಟ್ಫೀಲ್ಡ್ನಿಂದ (ಕಾಡುಗೋಡಿ) ರಾತ್ರಿ 12.30ಕ್ಕೆ, ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಹಾಗೂ ಮಾದಾವರ ಟರ್ಮಿನಲ್ಗಳಿಂದ ರಾತ್ರಿ 12.45ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 12.30ಕ್ಕೆ, ಆರ್.ವಿ. ರಸ್ತೆಯಿಂದ ರಾತ್ರಿ 2ಕ್ಕೆ ಕೊನೆ ರೈಲು ಸಂಚರಿಸಲಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1.30ಕ್ಕೆ ಕೊನೆಯ ರೈಲು ಹೊರಡಲಿದೆ.

ನಮ್ಮ ಮೆಟ್ರೊ 44 ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಿ, ಕ್ರೀಡಾಂಗಣಕ್ಕೆ ಮೆಟ್ರೊದಲ್ಲಿ ಸಂಚರಿಸಬಹುದು. ಐಪಿಎಲ್ ಕ್ರಿಕೆಟ್ ಇರುವ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ₹30 ಹಾಗೂ ಕಾರುಗಳಿಗೆ ₹60 ಶುಲ್ಕ ನಿಗದಿ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಐಪಿಎಲ್ ಟಿ–20 ಟಿಕೆಟ್ ಇರುವವರು ಅಂದು ‘ನಮ್ಮ ಮೆಟ್ರೊ’ದಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಎರಡೂ ಕಡೆಯ ಪ್ರಯಾಣಕ್ಕೆ ಐಪಿಎಲ್ ಪಂದ್ಯದ ಟಿಕೆಟ್ಗಳಲ್ಲಿ ‘ನಮ್ಮ ಮೆಟ್ರೊ’ ಕ್ಯೂಆರ್ ಕೋಡ್ ಮುದ್ರಿತವಾಗಿರುತ್ತದೆ. ಡಿಜಿಟಲ್ ಐಪಿಎಲ್ ಟಿಕೆಟ್ಗಳಲ್ಲಿಯೂ ಲಭ್ಯವಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಏ.18ರಂದು ಐಪಿಎಲ್ ಪಂದ್ಯವು ರಾತ್ರಿ 7.30ಕ್ಕೆ ಮುಗಿಯುವುದರಿಂದ ಮೆಟ್ರೊ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.