ಬೆಂಗಳೂರು: ನಮ್ಮ ಮೆಟ್ರೊವನ್ನು ತುಮಕೂರಿಗೆ ವಿಸ್ತರಿಸುವ ಕುರಿತು ಕಾರ್ಯಸಾಧ್ಯತಾ ವರದಿಯನ್ನು ಸರ್ಕಾರಕ್ಕೆ ಬೆಂಗಳೂರು ಮೆಟ್ರೊ ರೈಲ್ ನಿಗಮ(ಬಿಎಂಆರ್ಸಿಎಲ್) ಸಲ್ಲಿಸಿದೆ.

ಮೆಟ್ರೊ ಹಸಿರು ಮಾರ್ಗವನ್ನು ಮಾದಾವರದಿಂದ ತುಮಕೂರಿಗೆ ವಿಸ್ತರಿಸಲು ಕಾರ್ಯಸಾಧ್ಯತಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರವು ಬಿಎಂಆರ್ಸಿಎಲ್ಗೆ ವರ್ಷದ ಹಿಂದೆ ಸೂಚನೆ ನೀಡಿತ್ತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್ ಸಹಿತ ಕೆಲವರು ಈ ಬಗ್ಗೆ ಹೆಚ್ಚು ಆಸಕ್ತಿಯನ್ನು ತೋರಿಸಿದ್ದರು.

ಇದಕ್ಕಾಗಿ ಬಿಎಂಆರ್ಸಿಎಲ್ ಟೆಂಡರ್ ಕರೆದಿತ್ತು. ಹೈದರಾಬಾದ್ನ ಖಾಸಗಿ ಕಂಪನಿಯು ಸಮೀಕ್ಷೆ ನಡೆಸಿ ಬಿಎಂಆರ್ಸಿಎಲ್ಗೆ ವರದಿ ಒಪ್ಪಿಸಿತ್ತು.

56.6 ಕಿ.ಮೀ. ಮಾರ್ಗದಲ್ಲಿ, 25 ಎತ್ತರಿಸಿದ ನಿಲ್ದಾಣಗಳ ನಿರ್ಮಾಣ ಮಾಡುವ ಈ ಯೋಜನೆ ಇದಾಗಿದ್ದು, ರಾಜ್ಯ ಸರ್ಕಾರದ ಒಪ್ಪಿಗೆ ಸಿಕ್ಕಿದ ಮೇಲೆ ಕೇಂದ್ರ ಸರ್ಕಾರದ ಅನುಮೋದನೆಗೆ ವರದಿ ಸಲ್ಲಿಕೆಯಾಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.