ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣ ಮೆಟ್ರೊ ಕಾಮಗಾರಿ ಚುರುಕು

ನಾಗಾರ್ಜುನ ಕನ್‌ಸ್ಟ್ರಕ್ಷನ್‌ ಕಂಪನಿಗೆ
Last Updated 11 ಜೂನ್ 2022, 20:04 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೊ ರೈಲು ಕಾಮಗಾರಿ ಚುರುಕು ಪಡೆದಿದ್ದು, ಮೊದಲ ಗರ್ಡರ್‌ ನಿರ್ಮಾಣ ಕಾಮಗಾರಿ ಆರಂಭವಾಗಿದೆ.

ಮೆಟ್ರೊ ರೈಲು ಮಾರ್ಗದ ಸಿವಿಲ್ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಲು ಮುಂದಾಗಿರುವ ಬೆಂಗಳೂರು ಮೆಟ್ರೊ ರೈಲು
ನಿಗಮ(ಬಿಎಂಆರ್‌ಸಿಎಲ್‌), ಚಿಕ್ಕಜಾಲ ಬಳಿ ಮೊದಲ ಪಿಲ್ಲರ್ ನಿರ್ಮಾಣ ಕಾಮಗಾರಿಯನ್ನು ಮೇ 10ರಂದು ಆರಂಭಿಸಿತ್ತು. ಪಿಲ್ಲರ್‌ಗಳ ಮೇಲೆ ಅಳವಡಿಸುವ ‘ಯು’ ಆಕಾರದ ಗರ್ಡರ್‌ ನಿರ್ಮಾಣ ಕಾಮಗಾರಿಯನ್ನು ಶುಕ್ರವಾರ ಆರಂಭಿಸಿದೆ.

ಕೆ.ಆರ್‌.ಪುರ–ಹೆಬ್ಬಾಳ ಮಾರ್ಗದ ಮೂಲಕ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 36.44 ಕಿ.ಮೀ. ಉದ್ದದ ಸಿವಿಲ್ ಕಾಮಗಾರಿಯನ್ನು ಮೂರು ಪ್ಯಾಕೇಜ್‌ಗಳಾಗಿ ವಿಂಗಡಿಸಲಾಗಿದೆ. ಮೂರು ಪ್ಯಾಕೇಜ್‌ಗಳ ಗುತ್ತಿಗೆಯನ್ನು ನಾಗಾರ್ಜುನ ಕನ್‌ಸ್ಟ್ರಕ್ಷನ್‌ ಕಂಪನಿ (ಎನ್‌ಸಿಸಿ) ಪಡೆದುಕೊಂಡಿದೆ. ಈ ಮಾರ್ಗದ ವಯಡಕ್ಟ್ಮತ್ತು ನಿಲ್ದಾಣಗಳಿಗೆ ಅಗತ್ಯ ಇರುವ 2.23 ಲಕ್ಷ ಚದರ ಮೀಟರ್ ಜಾಗದ ಪೈಕಿ 2.15 ಲಕ್ಷ ಚದರ ಮೀಟರ್ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ.

ಕೆ.ಆರ್‌.ಪುರದಿಂದ ಹೆಬ್ಬಾಳ ತನಕದ ಮಾರ್ಗಕ್ಕೆ ಮರಗಳ ಸ್ಥಳಾಂತರ ಆಗಬೇಕಿರುವುದರಿಂದ ಕಾಮಗಾರಿ ವಿಳಂಬವಾಗಿದೆ. ಹೆಬ್ಬಾಳದಿಂದ ವಿಮಾನ ನಿಲ್ದಾಣ ತನಕದ ಕಾಮಗಾರಿ ವೇಗವಾಗಿ ನಡೆಯುತ್ತಿದೆ.

ಉಕ್ಕಿನ ಗರ್ಡರ್ ಅಳವಡಿಕೆ
ಟಿನ್‌ ಫ್ಯಾಕ್ಟರಿ ಬಳಿ ನಿಲ್ದಾಣ ಕಾಮಗಾರಿಯೂ ಚುರುಕಿನಿಂದ ನಡೆಯುತ್ತಿದ್ದು, ಉಕ್ಕು ಮತ್ತು ಕಬ್ಬಿಣದಿಂದ ತಯಾರಿಸಿದ ಸುಮಾರು 150 ಟನ್ ತೂಕದ ಎರಡು ಗರ್ಡರ್‌ಗಳನ್ನು ಅಳವಡಿಸಲಾಯಿತು. ಸಾಮಾನ್ಯವಾಗಿ ದೊಡ್ಡ ರಸ್ತೆ ಅಥವಾ ಸೇತುವೆಗಳ ನಿರ್ಮಾಣದ ವೇಳೆ ಈ ರೀತಿಯ ಉಕ್ಕಿನ ಗರ್ಡರ್‌ಗಳನ್ನು ಅಳವಡಿಸಲಾಗುತ್ತದೆ. ಈ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಟಿಡಿ ಸಿಮೆಂಟೇಷನ್ ಇಂಡಿಯಾ ಕಂಪನಿಯು ಎ.ಎಸ್. ಕ್ರೇನ್‌ ಸರ್ವೀಸ್‌ನಿಂದ ದೊಡ್ಡ ಕ್ರೇನ್‌ಗಳನ್ನು ಪಡೆ‌ದು ಈ ಗರ್ಡರ್ ಅಳವಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT