ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದ ವಾಣಿಜ್ಯ ಸಂಚಾರದ ಉದ್ಘಾಟನೆ ನಾಳೆ (ಆ.10) ನಡೆಯಲಿದ್ದು ಈ ಸಂದರ್ಭದಲ್ಲಿ ಬೆಂಗಳೂರು ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎಕ್ಸ್ನಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಅವರು, ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು ಬೆಂಗಳೂರು ಮೆಟ್ರೊದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ KSR ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೊದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರು ಮೆಟ್ರೊದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಗುವುದು.

ನಮ್ಮ ಮೆಟ್ರೊ ಹಳದಿ ಮಾರ್ಗ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಸಿಕ್ಕಿರಲಿಲ್ಲ. ಇದರಿಂದ ಅನೇಕರು ಬೇಸರಗೊಂಡಿದ್ದರು. ಅಂತೂ ಮೆಟ್ರೊ ಹಳದಿ ಮಾರ್ಗ ಉದ್ಘಾಟನೆಯಾಗಿ ಜನ ಪ್ರಯಾಣಿಸುವಂತಾಗುತ್ತಿದೆ.
.ಹಳದಿ ಮೆಟ್ರೊ ಮಾರ್ಗ ಬೇಗ ಆರಂಭಕ್ಕೆ ಒತ್ತಾಯ: ಇದು ವೇಗದ ಆಡಳಿತದ ಯುಗ; ತೇಜಸ್ವಿ.ನಮ್ಮ ಮೆಟ್ರೊ ಹಳದಿ ಮಾರ್ಗ: ಪ್ರಧಾನಿಗೆ ಆಹ್ವಾನ ನೀಡಿದ್ದು ನಾವೇ- ಡಿಕೆಶಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.