ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಮ್ಮ ಮುತ್ತು-–ನಮ್ಮ ರಾಜ್’ ಇ-–ಪುಸ್ತಕ ಬಿಡುಗಡೆ

Last Updated 26 ಏಪ್ರಿಲ್ 2021, 21:06 IST
ಅಕ್ಷರ ಗಾತ್ರ

ಬೆಂಗಳೂರು: ನಟ ಡಾ.ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಮಲ್ಲೇಶ್ವರದ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯ ಪ್ರಗತಿ ವಿದ್ಯಾರ್ಥಿಗಳ ಒಕ್ಕೂಟ ಹೊರ ತಂದಿರುವ‘ನಮ್ಮ ಮುತ್ತು-ನಮ್ಮ ರಾಜ್‘ ಇ-ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ರಾಷ್ಟ್ರೀಯ ರುಡ್ ಸೆಟ್ ಅಕಾಡೆಮಿಯ ಮಹಾ ನಿರ್ದೇಶಕ ಸತೀಯ ಮೂರ್ತಿ ಅವರುಇ-ಪುಸ್ತಕವನ್ನು ಲೋಕಾರ್ಪಣೆ ಮಾಡಿದರು.

‘ರಾಜಕುಮಾರ್ ಭಾರತೀಯ ಚಿತ್ರರಂಗದ ಧೀಮಂತ ನಟ. ಕನ್ನಡ ಚಿತ್ರರಂಗಕ್ಕೆ ಜಗತ್ತಿನಾದ್ಯಂತ ಮನ್ನಣೆ ಸಿಗಲು ಅವರೂ ಕಾರಣ. ಕನ್ನಡ ಚಿತ್ರಗಳಲ್ಲಿ ಮಾತ್ರ ಅಭಿನಯಿಸುತ್ತೇನೆಂದು ಅವರು ನಿರ್ಧಾರ ಮಾಡದಿದ್ದರೆ, ಇಂದು ಕನ್ನಡ ಚಿತ್ರರಂಗವೆಂಬ ಪ್ರತ್ಯೇಕ ಅಸ್ತಿತ್ವವೇ ಇರುತ್ತಿರಲಿಲ್ಲ’ ಎಂದುಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯ ನಿರ್ದೇಶಕ ಎಂ. ವೆಂಕಟೇಶ ಶೇಷಾದ್ರಿ ಅಭಿಪ್ರಾಯಪಟ್ಟರು.

‘ರಾಜಕುಮಾರ್ ಅವರ ಮಾಹಿತಿ ಕಲೆ ಹಾಕುವ ಕೆಲಸವನ್ನುವಿದ್ಯಾರ್ಥಿ ಗಳಿಗೆ ವಹಿಸಿದ್ದೆವು. ಅದೇಇಂದು ಇ–ಪುಸ್ತಕದ ರೂಪ ಪಡೆದುಕೊಂಡಿದೆ. ಸರ್ಕಾರವು ರಾಜಕುಮಾರ್ ಅವರ ಜೀವನ ಚರಿತ್ರೆ ಮತ್ತು ಸಾಧನೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ, ಕೈಗೆಟಗುವ ದರದಲ್ಲಿ ಓದುಗರಿಗೆ ತಲುಪಿಸಬೇಕು’ ಎಂದೂ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT