ಬೆಂಗಳೂರು: ನಗರದ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲು ಸ್ಥಳ ಮಂಜೂರು ಮಾಡುವಂತೆ ಕೋರಿ, ಬೆಂಗಳೂರು ಸಹಕಾರ ಹಾಲು ಒಕ್ಕೂಟದ(ಬಮೂಲ್) ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ದಕ್ಷಿಣ ಭಾರತದಲ್ಲಿಯೇ ಅತ್ಯಂತ ದೊಡ್ಡ ಹಾಲು ಉತ್ಪಾದಕರ ಸಹಕಾರ ಸಂಘವಾಗಿರುವ ಬಮೂಲ್, 2250 ಸಹಕಾರಿ ಸಂಘಗಳನ್ನು ಹೊಂದಿದೆ. ನಿತ್ಯ 18 ಲಕ್ಷ ಲೀಟರ್ಗೂ ಹೆಚ್ಚು ಹಾಲು ಶೇಖರಿಸಿ, ಸಂಸ್ಕರಿಸಿ, ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳ ನಾಗರಿಕರಿಗೆ ಪೂರೈಕೆ ಮಾಡುತ್ತಿದೆ. ಈಗ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಜಾಲ ವಿಸ್ತರಿಸುವ ದೃಷ್ಟಿಯಿಂದ ಮೆಟ್ರೊ ನಿಲ್ದಾಣಗಳ ಮುಂಭಾಗದಲ್ಲಿ ನಂದಿನಿ ಪಾರ್ಲರ್ಗಳನ್ನು ತೆರೆಯಲು ಕೆಎಂಎಫ್/ಬಮೂಲ್ ಹೆಸರಿಗೆ ಜಾಗ ಮಂಜೂರು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.