ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಂದಿನಿ ಪಾರ್ಲರ್

Last Updated 12 ಅಕ್ಟೋಬರ್ 2020, 20:32 IST
ಅಕ್ಷರ ಗಾತ್ರ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕರ್ಷಕ ವಿನ್ಯಾಸದ ‘ನಂದಿನಿ’ ಮಳಿಗೆಯನ್ನು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌) ಆರಂಭಿಸಿದೆ.

ನಂದಿನಿ ಹಾಲಿನ ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಟ್ಟದ ಗ್ರಾಹಕರಿಗೂ ಪರಿಚಯಿಸುವ ಸಲುವಾಗಿ ಈ ಮಳಿಗೆ ತೆರೆಯಲಾಗಿದೆ. ದಿನದ 24 ಗಂಟೆಗಳೂ ಈ ಪಾರ್ಲರ್ ಕಾರ್ಯನಿರ್ವಹಿಸಲಿದೆ ಎಂದು ಕೆಎಂಎಫ್ ತಿಳಿಸಿದೆ.

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್, ಮಳಿಗೆ ಉದ್ಘಾಟಿಸಿದರು.ವಿಮಾನ ನಿಲ್ದಾಣ ಮತ್ತು ಕೆಎಂಎಫ್‍ನ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT