ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್) ಬುಧವಾರ ಏಕಕಾಲಕ್ಕೆ 500 ನಂದಿನಿ ಮಳಿಗೆಗಳನ್ನು ರಾಜ್ಯದಾದ್ಯಂತ ಆರಂಭಿಸಿದೆ.

ಕಲಬುರಗಿಯಲ್ಲಿ ಬುಧವಾರ ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ನಂದಿನಿ ಮಳಿಗೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು ಎಂದು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಈಗಾಗಲೇ 2,598 ನಂದಿನಿ ಮಳಿಗೆಗಳಿವೆ. ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ, ಕಲಬುರಗಿ, ಬೀದರ್ ಮತ್ತು ಯಾದಗಿರಿ ಪ್ರದೇಶಗಳಲ್ಲಿ ಹೊಸದಾಗಿ 64 ಮಳಿಗೆಗಳು ಸೇರಿದಂತೆ ಒಟ್ಟು 500 ನಂದಿನಿ ಮಳಿಗೆಗಳು ಈಗ ಕಾರ್ಯಾರಂಭ ಮಾಡಿವೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.