ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾವೇರಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಿದ್ದ ನಂಜೇಗೌಡರು: ಪ್ರಸನ್ನಕುಮಾರ್

Published : 11 ಆಗಸ್ಟ್ 2024, 14:03 IST
Last Updated : 11 ಆಗಸ್ಟ್ 2024, 14:03 IST
ಫಾಲೋ ಮಾಡಿ
Comments

ಬೆಂಗಳೂರು: ‘ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ನಂಜೇಗೌಡರು ನಿರಂತರವಾಗಿ ಪ್ರಯತ್ನಿಸಿದ್ದರು’ ಎಂದು ನೀರಾವರಿ ತಜ್ಞ ಅರ್ಜುನಹಳ್ಳಿ ಪ್ರಸನ್ನಕುಮಾರ್ ಹೇಳಿದರು.

ಎಚ್.ಎನ್. ನಂಜೇಗೌಡರ ಅಭಿಮಾನಿ ಬಳಗ ಹಾಗೂ ಹನ್ಯಾಳು ಪ್ರಕಾಶನ ಮೈಸೂರು ಸಹಯೋಗದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಎಚ್.ಎಸ್. ಗೋವಿಂದಗೌಡ ಸಂಪಾದಕತ್ವದ ‘ಧೀಮಂತ ಧುರೀಣ ಎಚ್.ಎನ್. ನಂಜೇಗೌಡರು’ ಎಂಬ ಸಂಸ್ಮರಣ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಲೋಕಸಭೆಯಲ್ಲಿ ನಂಜೇಗೌಡರು ನೀರಾವರಿಗೆ ಸಂಬಂಧಿಸಿದಂತೆ ವಿಚಾರಗಳನ್ನು ಮಾತನಾಡುತ್ತಿದ್ದರೆ, ಇಡೀ ಲೋಕಸಭೆಯೇ ಸ್ತಬ್ಧವಾಗುತ್ತಿತ್ತು. ಪ್ರತಿಯೊಬ್ಬರೂ ಅವರ ಮಾತುಗಳನ್ನು ಆಲಿಸುತ್ತಿದ್ದರು. ಹರಿಯಾಣ, ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಹಾಗೂ ಗುಜರಾತ್‌ ರಾಜ್ಯಗಳ ಸಂಸದರು ನಂಜೇಗೌಡರ ಬಳಿ ತಮ್ಮ ರಾಜ್ಯಗಳಲ್ಲಿನ ನೀರಾವರಿ ಸಮಸ್ಯೆಗಳ ಕುರಿತು ಸಲಹೆಗಳನ್ನು ಪಡೆಯುತ್ತಿದ್ದರು’ ಎಂದು ನೆನಪಿಸಿಕೊಂಡರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಕೆ. ನಾರಾಯಣಗೌಡ ಮಾತನಾಡಿ, ‘1970-80ರಲ್ಲಿ ನಂಜೇಗೌಡರು ನೀರಾವರಿ ಸಚಿವರಾಗಿ ಕೆಲಸ ಮಾಡಿದ್ದರು. ನಂತರದ ಮೂರು ದಶಕಗಳ ಕಾಲ ನೀರಾವರಿಗೆ ಸಂಬಂಧಿಸಿದ ವಿಷಯಗಳ ಕುರಿತು ಆಳವಾದ ಅಧ್ಯಯನ ಹಾಗೂ ಸಂಶೋಧನೆಗಳನ್ನು ಮಾಡಿದ್ದರು’ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ‌ ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಸಚಿವ ರಾಮಚಂದ್ರೇಗೌಡ, ಶಾಸಕ ಎ. ಮಂಜು, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎನ್. ಬಾಲಕೃಷ್ಣ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT