ಶುಕ್ರವಾರ, ಜನವರಿ 24, 2020
17 °C

ನರಗುಂದ ಹೆಚ್ಚುವರಿ ಸಾಲಿಸಿಟರ್ ಜನರಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೈಕೋರ್ಟ್‌ನ ಹಿರಿಯ ವಕೀಲ ಎಂ.ಬಿ.ನರಗುಂದ ಅವರನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್‌ (ಎಎಸ್‌ಜೆಐ) ಆಗಿ ಕೇಂದ್ರ ಸರ್ಕಾರ ಸೋಮವಾರ ನೇಮಕ ಮಾಡಿದೆ.

ರಾಜ್ಯ ಹೈಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ನರಗುಂದ ನಿರ್ವಹಿಸಲಿದ್ದಾರೆ. ಅವರ ಅಧಿಕಾರ ಅವಧಿ ಮೂರು ವರ್ಷ.

ಹಿಂದಿನ ಎಎಸ್‌ಜಿಐ ಆಗಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯ ಅಡ್ವಕೇಟ್‌ ಜನರಲ್ ಆಗಿ ನೇಮಕಗೊಂಡಿದ್ದರು. ನಂತರ ತೆರವುಗೊಂಡಿದ್ದ ಹುದ್ದೆಗೆ ಈ ನೇಮಕ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು